ಶನಿವಾರ, ಜೂನ್ 19, 2021
26 °C

ನ್ಯಾ. ಬಾಲಕೃಷ್ಣನ್ ವಿರುದ್ಧ ತನಿಖೆ: ವರದಿ ಸಲ್ಲಿಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ (ಪಿಟಿಐ): ಭಾರತದ ನಿವೃತ್ತ ಮುಖ್ಯ ನ್ಯಾಯಮೂರ್ತಿ ಕೆ.ಜಿ.ಬಾಲಕೃಷ್ಣನ್ ಹಾಗೂ ಅವರ ಸಂಬಂಧಿಕರು ಆದಾಯಕ್ಕೆ ಮೀರಿದ ಆಸ್ತಿ ಸಂಗ್ರಹಿಸಿದ್ದಾರೆ ಎಂಬ ಆರೋಪಗಳ ಕುರಿತು ತನಿಖೆ ನಡೆಸುತ್ತಿರುವುದಾಗಿ ಸುಪ್ರೀಂಕೋರ್ಟ್‌ಗೆ ತಿಳಿಸಿರುವ ಕೇಂದ್ರ ಸರ್ಕಾರ, ಈ ಸಂಬಂಧ ತನಿಖಾ ಪ್ರಗತಿಯ ವರದಿ ಸಲ್ಲಿಸಿದೆ.

ಸಿವಿಲ್ ಸೊಸೈಟಿ ಕಾಮನ್ ಕಾಸ್ ಸಂಘಟನೆಯ ಪ್ರಶಾಂತ್ ಭೂಷಣ್ ಅವರು ಬಾಲಕೃಷ್ಣನ್ ಹಾಗೂ ಅವರ ಬಂಧುಗಳ ವಿರುದ್ಧ ಭ್ರಷ್ಟಾಚಾರದ ಆರೋಪ ಹೊರಿಸಿ ನ್ಯಾಯಾಲಯದಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದು, ನ್ಯಾಯಪೀಠದ ಮುಂದೆ ಸರ್ಕಾರದ ಪರವಾಗಿ ಅಟಾರ್ನಿ ಜನರಲ್ ವಹನ್ವತಿ ಹಾಜರಾಗಿದ್ದರು.

ನ್ಯಾಯಮೂರ್ತಿಯಾಗಿದ್ದ ಸಂದರ್ಭದಲ್ಲಿ ಬಾಲಕೃಷ್ಣನ್ ಹಾಗೂ ಅವರ ಬಂಧುಗಳು ಆದಾಯಕ್ಕೆ ಮೀರಿ ಆಸ್ತಿ ಸಂಗ್ರಹಿಸಿದ್ದಾರೆ ಎಂಬ ಆರೋಪಗಳಿವೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.