ಮಂಗಳವಾರ, ಮೇ 24, 2022
30 °C

ನ್ಯಾ. ಸದಾಶಿವ ಆಯೋಗದ ವರದಿ ಒಪ್ಪದಂತೆ ಒತ್ತಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಪರಿಶಿಷ್ಟರಲ್ಲಿ ಉಪಜಾತಿಗಳಿಗೆ ಸೇರಿದವರ ಸಂಖ್ಯೆ ರಾಜ್ಯದಲ್ಲಿ ಎಷ್ಟಿದೆ ಎಂಬುದನ್ನು ನಿಖರವಾಗಿ ಗಣತಿ ಮಾಡುವವರೆಗೂ ನ್ಯಾಯಮೂರ್ತಿ ಎ.ಜೆ. ಸದಾಶಿವ ಆಯೋಗದ ವರದಿಯನ್ನು ಸರ್ಕಾರ ಒಪ್ಪಬಾರದು ಎಂದು ರಾಜ್ಯ ಛಲವಾದಿ ಮಹಾಸಭಾ ಒತ್ತಾಯಿಸಿದೆ.

ರಾಜ್ಯದಲ್ಲಿ ಪರಿಶಿಷ್ಟ ಜಾತಿಗಳ ಪೈಕಿ ಬಲಗೈ ಪಂಗಡಕ್ಕೆ ಸೇರಿದವರೇ ಹೆಚ್ಚಿನ ಸಂಖ್ಯೆಯಲ್ಲಿ ಇದ್ದಾರೆ. ಆದರೆ ಆಯೋಗದ ವರದಿಯಲ್ಲಿ ಎಡಗೈ ಪಂಗಡದವರು ರಾಜ್ಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಇದ್ದಾರೆ ಎಂದು ಹೇಳಲಾಗಿದೆ. ಹಾಗಾಗಿ, ಉಪಜಾತಿಗಳಿಗೆ ಸೇರಿದ ಪರಿಶಿಷ್ಟರ ಸಂಖ್ಯೆ ಎಷ್ಟು ಎಂಬುದನ್ನು ಖಚಿತಪಡಿಸಿಕೊಂಡ ನಂತರವೇ ವರದಿಯನ್ನು ಸರ್ಕಾರ ಒಪ್ಪಬೇಕು ಎಂದು ಮಹಾಸಭಾದ ಅಧ್ಯಕ್ಷ ಕೆ. ವೀರಭದ್ರಪ್ಪ ಪತ್ರಿಕಾ ಹೇಳಿಕೆಯಲ್ಲಿ ಒತ್ತಾಯಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.