`ಪಂಚಮಸಾಲಿ' 2ಎ ವರ್ಗಕ್ಕೆ ಸೇರಿಲು ಒತ್ತಾಯ

7

`ಪಂಚಮಸಾಲಿ' 2ಎ ವರ್ಗಕ್ಕೆ ಸೇರಿಲು ಒತ್ತಾಯ

Published:
Updated:

ಬೆಂಗಳೂರು: `ರಾಜ್ಯದಲ್ಲಿ ಹೆಚ್ಚು ಜನಸಂಖ್ಯೆಯನ್ನು ಹೊಂದಿರುವ ಪಂಚಮಸಾಲಿ ಸಮುದಾಯವನ್ನು 2ಎ ವರ್ಗಕ್ಕೆ ಸೇರಿಸಬೇಕು' ಎಂದು ರಾಜ್ಯ ವೀರಶೈವ ಪಂಚಮಸಾಲಿ ಸಂಘದ ಅಧ್ಯಕ್ಷ ಬಸವರಾಜ ದಿಂಡೂರ ಹೇಳಿದರು.ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, `ಪಂಚಮಸಾಲಿ ಸಮುದಾಯವು 80 ಲಕ್ಷ ಜನಸಂಖೆಯನ್ನು ಹೊಂದಿದ್ದರೂ, ಮೀಸಲಾತಿ ಸಿಗದೇ ಆರ್ಥಿಕವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಹಿಂದುಳಿದಿದೆ' ಎಂದರು.`ಪಂಚಮಸಾಲಿ ಸಮುದಾಯವನ್ನು 2ಎ ವರ್ಗಕ್ಕೆ ಸೇರಿಸಿ ತಮಿಳುನಾಡು, ಉತ್ತರಪ್ರದೇಶ, ಬಿಹಾರ ರಾಜ್ಯಗಳ ಮಾದರಿಯ ಮೀಸಲಾತಿಯನ್ನು ಕಲ್ಪಿಸಬೇಕು' ಎಂದು ಒತ್ತಾಯಿಸಿದರು.`ಸಮುದಾಯವು ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಕುರಿತು ಡಿಸೆಂಬರ್ 25ರಂದು ಹರಿಹರದಲ್ಲಿ ನಡೆಯಲಿರುವ ವಾರ್ಷಿಕ ಸಮ್ಮೇಳನದಲ್ಲಿ ಚರ್ಚಿಸಲಾಗುವುದು' ಎಂದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry