ಪಂಚವಾರ್ಷಿಕ ಯೋಜನೆ ಮುನ್ನೋಟ ಕುರಿತು ಸಭೆ

ಗುರುವಾರ , ಜೂಲೈ 18, 2019
29 °C

ಪಂಚವಾರ್ಷಿಕ ಯೋಜನೆ ಮುನ್ನೋಟ ಕುರಿತು ಸಭೆ

Published:
Updated:

ಕವಿತಾಳ: ಪಂಚಾಯಿತಿ ವ್ಯಾಪ್ತಿಯ ಎಲ್ಲಾ ವಾರ್ಡ್‌ಗಳು ಮತ್ತು ಎಲ್ಲಾ ಇಲಾಖೆಗಳಿಗೆ ಬೇಕಾಗುವ ಮೂಲಭೂತ ಸೌಕರ್ಯಗಳು ಮತ್ತು ಸಮಸ್ಯೆಗಳಿಗೆ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಯೋಜನೆ ತಯಾರಿಸಲಾಗವುದು ಎಂದು ಗ್ರಾಮ ಪಂಚಾಯಿತಿ ಅಭಿವೃದ್ದಿ ಅಧಿಕಾರಿ ಪಂಪನಗೌಡ ಹೇಳಿದರು.ಪಟ್ಟಣದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಿಆರ್‌ಸಿ ಕಟ್ಟಡದಲ್ಲಿ ಸೋಮವಾರ ಆಯೋಜಿಸಿದ್ದ ಪಂಚವಾರ್ಷಿಕ ಯೋಜನೆಗಳ ಮುನ್ನೋಟ ಕುರಿತ ಪೂರ್ವಬಾವಿ ಸಭೆಯಲ್ಲಿ ಅವರು ಮಾತನಾಡಿದರು.ವಿವಿಧ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಿ ಗ್ರಾಮದ ಸಮಗ್ರ ಅಭಿವೃದ್ದಿಗೆ ಪೂರಕವಾಗುವ ನಿಟ್ಟಿನಲ್ಲಿ ಕಾರ್ಯಯೋಜನೆ ತಯಾರಿಸುವುದು ಮತ್ತು ಕುಡಿಯುವ ನೀರು, ರಸ್ತೆ ಹಾಗೂ ವಿದ್ಯುತ್‌ನಂತ ಜ್ವಲಂತ ಸಮಸ್ಯೆಗಳ ಪರಿಹಾರಕ್ಕೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಯೋಜನಾ ವರದಿ ತಯಾರಿಸಿ ಜಿಲ್ಲಾ ಪಂಚಾಯಿತಿಗೆ ನೀಡಲು ಮೈಸೂರು ಮೂಲದ ಅಬ್ದುಲ್ ನಜೀರ್‌ಸಾಬ್ ಗ್ರಾಮೀಣಾಭಿವೃದ್ದಿ ಸಂಸ್ಥೆಗೆ ವಹಿಸಿಕೊಡಲಾಗಿದೆ ಎಂದರು.ಪಟ್ಟಣದಲ್ಲಿ ಮೂರು ದಿನಗಳ ಕಾಲ ಕಾರ್ಯನಿರ್ವಹಿಸುವ ಸಂಸ್ಥೆಯ ಸಂಪನ್ಮೂಲ ವ್ಯಕ್ತಿಗಳಿಗೆ ಪಂಚಾಯಿತಿ ಸದಸ್ಯರು, ಸಂಘ ಸಂಸ್ಥೆಗಳ ಮುಖ್ಯಸ್ಥರು ಮತ್ತು ಸಾರ್ವಜನಿಕರು ಸೂಕ್ತ ಮಾಹಿತಿ ನೀಡಿ ಸಹಕರಿಸಬೇಕು ಎಂದು ಮನವಿ ಮಾಡಿದರು. ಅಧ್ಯಕ್ಷೆ ಶಾಂತಮ್ಮ ಅರಿಕೇರಿ, ಉಪಾಧ್ಯಕ್ಷೆ ಕರಿಯಮ್ಮ, ಸಹಾಯಕ ಸಬ್ ಇನ್ಸ್‌ಪೆಕ್ಟರ್ ಶರಣಪ್ಪ, ಅಬ್ದುಲ್ ನಜೀರಸಾಬ್ ಸಂಸ್ಥೆಯ ಸಂಪನ್ಮೂಲ ವ್ಯಕ್ತಿ ಬಸವರಾಜ ಹಾವಿನ್, ಸಿದ್ದಪ್ಪ ಡಂಬಳ ಇದ್ದರು

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry