ಶಿರಹಟ್ಟಿ: ರಸ್ತೆಯಲ್ಲಿ ಅತಿಕ್ರಮಣಗೊಂಡ ಸ್ಥಳವನ್ನು ತೆರವುಗೊಳಿಸಿ ಪಾದಚಾರಿಗಳಿಗೆ ಅನುಕೂಲ ಮಾಡಬೇಕೆಂದು ಆಗ್ರಹಿಸಿ ಗ್ರಾಮಸ್ಥರು ಬುಧವಾರ ಗ್ರಾಮ ಪಂಚಾಯಿತಿಗೆ ಬೀಗ ಜಡಿದು ಪ್ರತಿಭಟನೆ ನಡೆಸಿದರು.‘ಗ್ರಾಮದ ಬಸ್ ನಿಲ್ದಾಣದಿಂದ ಪಂಚಾಯಿತಿವರೆಗೆ ಮುಖ್ಯ ರಸ್ತೆಯಾಗಿದ್ದು, ಕೆಲವರು ರಸ್ತೆಯಲ್ಲಿ ಅತಿಕ್ರಮಣ ಮಾಡಿಕೊಂಡು ವಹಿವಾಟು ನಡೆಸುತ್ತಿರುವದರಿಂದ ಸಾರ್ವಜನಿಕರಿಗೆ ತೀವ್ರ ತೊಂದರೆಯಾಗಿದೆ’ ಎಂದು ಗ್ರಾಮಸ್ಥರು ಆರೋಪಿಸಿದರು.

‘ಸಮಸ್ಯೆ ಕುರಿತು ಹಲವಾರು ಬಾರಿ ಗ್ರಾಮ ಪಂಚಾಯಿತಿ ಕಾರ್ಯಾಲಯದ ಗಮನಕ್ಕೆ ತಂದರೂ ಪ್ರಯೋಜನವಾಗಿಲ್ಲ.ಪಂಚಾಯಿತಿ ನಿರ್ಲಕ್ಷದಿಂದ ಎಲ್ಲ ಬೆಳವಣಿಗೆಗಳು ನಡೆಯುತ್ತಿದ್ದು, ಪಂಚಾಯಿತಿ ಪ್ರತಿನಿಧಿಗಳು ಈ ಕುರಿತು ಸೂಕ್ತ ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದರು.ಚನ್ನವೀರಪ್ಪ ಕೋಡಿ, ಸಂಜೀವರೆಡ್ಡಿ ಮುಳ್ಳುರ, ಈಶ್ವರಪ್ಪ ಮಲ್ಲಿಗವಾಡ, ಉಳವೆಪ್ಪ ಕೊಂಡಿ, ಶಿವಾನಂದ ಮುಳಗುಂದ, ಶೇಖಪ್ಪ ಮಲ್ಲಾಡದ, ರಜಾಕ್ಸಾಬ ಹೊಳಲ ಮತ್ತಿತರರು ಈ ಸಂದರ್ಭದಲ್ಲಿ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.