ಪಂಚಾಯಿತಿಗೊಂದು ಮಾದರಿ ಶಾಲೆ ಸ್ವಾಗತಾರ್ಹ

ಮಂಗಳವಾರ, ಜೂಲೈ 23, 2019
20 °C

ಪಂಚಾಯಿತಿಗೊಂದು ಮಾದರಿ ಶಾಲೆ ಸ್ವಾಗತಾರ್ಹ

Published:
Updated:

ಸರ್ಕಾರವು ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಮಾದರಿ ಶಾಲೆಯನ್ನು ಪ್ರಾರಂಭಿಸುವ ನಿಟ್ಟಿನಲ್ಲಿ ಯೋಚಿಸುತ್ತಿರುವುದು ಸ್ವಾಗತಾರ್ಹ.ಪ್ರಸ್ತುತ 6-18 ವರ್ಷ ವಯೋಮಿತಿಯೊಳಗಿನ ಎಲ್ಲಾ ಮಕ್ಕಳಿಗೂ ಗುಣಾತ್ಮಕ ಶಿಕ್ಷಣ ನೀಡುವುದು ಸರ್ಕಾರದ ಗುರಿ. ಪ್ರಸ್ತುತ ಸರ್ಕಾರಿ ಶಾಲೆಗಳ ಸ್ಥಿತಿ- ಗತಿಯನ್ನು ಗಮನಿಸಿದರೆ ಗುಣಾತ್ಮಕ ಶಿಕ್ಷಣ ನೀಡುವ ನಿಟ್ಟಿನಲ್ಲಿ ನಮ್ಮ ಪಯಣ ಆಮೆಗತಿಯ ಓಟದಂತೆ ಇದೆ.ಏಕೋಪಾಧ್ಯಾಯ ಶಾಲೆಗಳಲ್ಲಿ 1ರಿಂದ 5ನೇ ತರಗತಿಯವರೆಗೆ ಒಬ್ಬರೇ ಶಿಕ್ಷಕರು ಬೋಧಿಸುತ್ತಿದ್ದಾರೆ. ಹಿರಿಯ ಪ್ರಾಥಮಿಕ ಶಾಲೆಗಳಲ್ಲಿ (1-7) ಒಬ್ಬ ಅಥವಾ ಇಬ್ಬರು ಶಿಕ್ಷಕರಿದ್ದು, ಪ್ರಯೋಗಾಲಯ, ಕ್ರೀಡಾಂಗಣ ಮುಂತಾದ ಮೂಲಭೂತ ಸೌಕರ್ಯಗಳ ಕೊರತೆಗಳನ್ನು ಎದುರಿಸುತ್ತಿವೆ.ಸಾರಿಗೆ ವ್ಯವಸ್ಥೆ ಸೇರಿದಂತೆ ಎಲ್ಲಾ ಮೂಲಭೂತ ಸೌಲಭ್ಯಗಳನ್ನು ಒದಗಿಸಿ ಮಾದರಿ ಶಾಲೆ ಪ್ರಾರಂಭಿಸಿ, ಆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಎಲ್ಲಾ ಮಕ್ಕಳು ಆ ಶಾಲೆಗೆ ದಾಖಲಾಗುವ ಜೊತೆಗೆ ಗುಣಾತ್ಮಕ ಶಿಕ್ಷಣ ಪಡೆಯುವಂತಾಗಬೇಕೆಂಬುದು ಶಿಕ್ಷಕರ ಕೂಗು. 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry