ಭಾನುವಾರ, ಜನವರಿ 19, 2020
20 °C

ಪಂಚಾಯಿತಿ ಉಪ ಚುನಾವಣೆ: ರಜೆ ಘೋಷಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಇದೇ 10ರಂದು 9 ಗ್ರಾಮ ಪಂಚಾಯಿತಿಗಳು, ಎರಡು ಜಿಲ್ಲಾ ಪಂಚಾಯಿತಿ ಮತ್ತು 12 ತಾಲ್ಲೂಕು ಪಂಚಾಯಿತಿ ಕ್ಷೇತ್ರಗಳು ಹಾಗೂ ವಿವಿಧ ನಗರ ಸ್ಥಳೀಯ ಸಂಸ್ಥೆಗಳಿಗೆ ಉಪ ಚುನಾವಣೆ ನಡೆಯುವ ಹಿನ್ನೆಲೆಯಲ್ಲಿ ಆ ದಿನ ಸ್ಥಳೀಯವಾಗಿ ರಜೆ ಘೋಷಿಸಲಾಗಿದೆ.



ಚುನಾವಣೆ ನಡೆಯುವ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಬರುವ ರಾಜ್ಯ ಮತ್ತು ಕೇಂದ್ರ ಸರ್ಕಾರದ ಕಚೇರಿಗಳು, ಕಾರ್ಖಾನೆಗಳು, ಶಾಲಾ- ಕಾಲೇಜುಗಳು, ರಾಷ್ಟ್ರೀಕೃತ ಬ್ಯಾಂಕ್‌ಗಳು, ಜೀವವಿಮಾ ನಿಗಮ ಇತ್ಯಾದಿಗಳಿಗೂ ರಜೆ ಅನ್ವಯವಾಗಲಿದೆ.

ಪ್ರತಿಕ್ರಿಯಿಸಿ (+)