ಬುಧವಾರ, ಮೇ 18, 2022
26 °C

ಪಂಚಾಯಿತಿ ಚುನಾವಣೆ: ಅರ್ಜಿ ವಜಾ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ (ಐಎಎನ್‌ಎಸ್): ಭದ್ರತೆ ದೃಷ್ಟಿಯಿಂದ ಪಂಚಾಯಿತಿ ಚುನಾವಣೆಯನ್ನು ಮುಂದೂಡಲು ಸಾಧ್ಯವಿಲ್ಲ ಎಂದು ಸುಪ್ರೀಂಕೋರ್ಟ್ ತೀರ್ಪು ನೀಡಿದೆ.



ಮುಸ್ಲಿಮರ ಪ್ರಮುಖ ಹಬ್ಬವಾದ ರಂಜಾನ್ ಇದೇ ತಿಂಗಳಿನಿಂದ ಆರಂಭವಾಗುವುದರಿಂದ ಜುಲೈ11 ರಂದು ಐದು ಹಂತಗಳಲ್ಲಿ ನಡೆಯುವ ಪಂಚಾಯಿತಿ ಚುನಾವಣೆಯನ್ನು ಮುಂದೂಡಬೇಕು ಎಂದು ಸಾರ್ವಜನಿಕ ಹಿತಾಸಕ್ತಿಯನ್ನು ಸಲ್ಲಿಸಲಾಗಿತ್ತು.



ಅರ್ಜಿಯನ್ನು ವಜಾಗೊಳಿಸಿದ ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ ಎ.ಕೆ.ಪಟ್ನಾಯಕ್ ಹಾಗೂ ರಂಜನ್ ಗೊಗಯ್ ಅವರನ್ನು ಒಳಗೊಂಡ ವಿಭಾಗೀಯ ಪೀಠ ಭದ್ರತೆ ದೃಷ್ಟಿಯಿಂದ ಚುನಾವಣೆಯನ್ನು ಮುಂದೂಡಲು ಸಾಧ್ಯವಿಲ್ಲ ಎಂದು ಹೇಳಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.