ರಿಪ್ಪನ್ಪೇಟೆ: ಸರ್ಕಾರದಿಂದ ಮಂಜೂರಾದ ಕಾಮಗಾರಿಗೆ ಅಡ್ಡಿ ಪಡಿಸುತ್ತಿದ್ದಾರೆಂದು ಆರೋಪಿಸಿ ಗ್ರಾಮ ಪಂಚಾಯ್ತಿ ಸದಸ್ಯನ ವಿರುದ್ಧ ಬರುವೆ ಗ್ರಾಮಸ್ಥರು ಶಾಸಕರಲ್ಲಿ ಶುಕ್ರವಾರ ದೂರು ಸಲ್ಲಿಸಿದ್ದಾರೆ.

ಬರುವೆ ಗ್ರಾಮದ ಶಬರೀಶ ನಗರದಲ್ಲಿ ಶಾಸಕ ಗೋಪಾಲಕೃಷ್ಣ ಬೇಳೂರು ಅವರ ಅನುದಾನದಲ್ಲಿ ಮಂಜೂರಾದ ಒಳಚರಂಡಿ ಯೋಜನೆ ಕಾಮಗಾರಿ ನಡೆಸಲು ಸ್ಥಳೀಯ ಗ್ರಾಮ ಪಂಚಾಯ್ತಿ ಸದಸ್ಯ ಬಿ.ಕೆ. ನಾಗರಾಜ ಅಡ್ಡಿಪಡಿಸಿದ್ದಾರೆಂದು ಗ್ರಾಮಸ್ಥರ ಆರೋಪ.

ಸರ್ವೇ ನಂ. 80ರಲ್ಲಿ ಇರುವ ಸರ್ಕಾರಿ ಈ ಜಾಗವನ್ನು ಅವರು ಒತ್ತುವರಿ ಮಾಡಿಕೊಂಡಿದ್ದು, ಇದೀಗ ಸದರಿ ಕಾಮಗಾರಿಗೆ ಅಡ್ಡಿಪಡಿಸುತ್ತಿದ್ದು, ಅವರ ಮೇಲೆ ಕಾನೂನು ಕ್ರಮಕೈಗೊಂಡು ಸಾರ್ವಜನಿಕರ ಹಿತದೃಷ್ಟಿಯಿಂದ ಕೂಡಲೇ ಈ ಜಾಗ ತೆರವುಗೊಳಿಸಿ ಕಾಮಗಾರಿಗೆ ಅನುವು ಮಾಡಿಕೊಡಬೇಕು ಎಂದು ಗ್ರಾಮಸ್ಥರು ಆಗ್ರಹಿಸಿ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಗ್ರಾಮಸ್ಥರಾದ ಮಧುಚಂದ್ರ, ಆರ್.ಎಸ್. ನಾಗರಾಜ, ಬಿ.ಎಲ್. ಸುರೇಶ, ಟೀಕಾಚಾರಿ, ಮಂಜುನಾಥ ಸರ್ದಾರ್, ಉಮಾಪತಿ, ಹಾಗೂ ಚಂದ್ರಶೇಖರ ಇತರರು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.