ಗುರುವಾರ , ಆಗಸ್ಟ್ 13, 2020
25 °C

ಪಕ್ಷದಲ್ಲಿ ಪ್ರಮುಖ ಪಾತ್ರ, ರಾಹುಲ್‌ಗೆ ಬಿಟ್ಟ ವಿಚಾರ: ಸೋನಿಯಾ ಗಾಂಧಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಪಕ್ಷದಲ್ಲಿ ಪ್ರಮುಖ ಪಾತ್ರ, ರಾಹುಲ್‌ಗೆ ಬಿಟ್ಟ ವಿಚಾರ: ಸೋನಿಯಾ ಗಾಂಧಿ

ನವದೆಹಲಿ (ಪಿಟಿಐ): ಪಕ್ಷದಲ್ಲಿ ಪ್ರಮುಖ ಪಾತ್ರ ವಹಿಸುವ ಕುರಿತಂತೆ ನಿರ್ಧಾರ ಕೈಗೊಳ್ಳುವುದು ಸ್ವತಃ ರಾಹುಲ್ ಗಾಂಧಿಗೆ ಬಿಟ್ಟದ್ದು ಎಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಬುಧವಾರ ಇಲ್ಲಿ ಸ್ಪಷ್ಟ ಪಡಿಸಿದರು.

 

ಉಪ ರಾಷ್ಟ್ರಪತಿ ಚುನಾವಣೆಗೆ ಎರಡನೇಯ ಅವಧಿಗಾಗಿ ಬುಧವಾರ ಉಪ ರಾಷ್ಟ್ರಪತಿ ಹಮೀದ್ ಅನ್ಸಾರಿ ಅವರು ಸಂಸತ್ ಭವನದಲ್ಲಿ ನಾಮಪತ್ರ ಸಲ್ಲಿಸಿದ ಸಂದರ್ಭದಲ್ಲಿ ಹಾಜರಿದ್ದ ಸೋನಿಯಾ ಅವರು ನಂತರ ಸುದ್ದಿಗಾರರೊಂದಿಗೆ ಮಾತನಾಡುತ್ತ `ಅವನ (ರಾಹುಲ್ ಗಾಂಧಿ) ಪರವಾಗಿ ಯಾರೊಬ್ಬರು ತೀರ್ಮಾನ ತೆಗೆದುಕೊಳ್ಳಲಾರರು. ಆತನೇ ನಿರ್ಧಾರ ತೆಗೆದುಕೊಳ್ಳುತ್ತಾನೆ~ ಎಂದು ಹೇಳಿದರು.ಇತ್ತೀಚೆಗಷ್ಟೇ ಕಾಂಗ್ರೆಸ್‌ನ ಹಿರಿಯ ಮುಖಂಡರಾದ ದಿಗ್ವಿಜಯ ಸಿಂಗ್ ಹಾಗೂ ಸಲ್ಮಾನ್ ಖುರ್ಷಿದ್ ಅವರಿಂದ ಪಕ್ಷದಲ್ಲಿ ರಾಹುಲ್ ಅವರು ಪ್ರಮುಖ ಪಾತ್ರ ನಿರ್ವಹಿಸಲಿದ್ದಾರೆ ಎಂಬ ಹೇಳಿಕೆಗಳು ಬಂದ ಹಿನ್ನೆಲೆಯಲ್ಲಿ ಸೋನಿಯಾ ಅವರು ಈ ರೀತಿ ಪ್ರತಿಕ್ರಿಯಿಸಿದರು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.