ಮಂಗಳವಾರ, ಮೇ 24, 2022
30 °C

ಪಕ್ಷದ ಬಗ್ಗೆ ಮಾತನಾಡುವ ನೈತಿಕ ಹಕ್ಕಿಲ್ಲ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬಾಗೇಪಲ್ಲಿ: ಸುಮಾರು 36 ವರ್ಷಗಳಿಂದ ಸಿಪಿಎಂ ಪಕ್ಷದಲ್ಲಿ ತಾಲ್ಲೂಕು, ಜಿಲ್ಲಾ ಹಾಗೂ ರಾಜ್ಯ ಕಾರ್ಯದರ್ಶಿ ಮಂಡಳಿಯಲ್ಲಿ ಸದಸ್ಯರಾಗಿ ಕಾರ್ಯನಿರ್ವಹಿಸಿರುವ ಕೊಲಂಪಲ್ಲಿ ವೆಂಕಟ ಸ್ವಾಮಿರೆಡ್ಡಿ  ಪಕ್ಷದ ಬಗ್ಗೆ ಇಲ್ಲಸಲ್ಲದ ಹೇಳಿಕೆ ನೀಡುತ್ತಿರುವುದು ನಿಲ್ಲಿಸಬೇಕು ಎಂದು ಸಿಪಿಎಂ ಜಿಲ್ಲಾ ಕಾರ್ಯದರ್ಶಿ ಮಂಡಳಿ ಸದಸ್ಯ ಎಂ.ಪಿ.ಮುನಿವೆಂಕಟಪ್ಪ ಟೀಕಿಸಿದರು.ಪಟ್ಟಣದ ಸುಂದರಯ್ಯ ಭವನದಲ್ಲಿ ಮಂಗಳವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಪ್ರಗತಿಪರ ರೈತ ಎಂದು ಹೇಳಿಕೊಳ್ಳುತ್ತಿರುವ ಕೊಲಂಪಲ್ಲಿ ವೆಂಕಟಸ್ವಾಮಿರೆಡ್ಡಿ ಅವರು ಪಕ್ಷದ ಗಮನಕ್ಕೆ ತಾರದೇ ಪಕ್ಷ ವಿರೋಧ ಚಟುವಟಿಕೆಗಳಲ್ಲಿ ತೊಡಗಿಕೊಂಡಿದ್ದಾರೆ. ಪಕ್ಷದ ಬಗ್ಗೆ ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಿರುವುದು ಖಂಡನೀಯ~ ಎಂದರು.`ಬಡತನ ರೇಖೆಗಿಂತ ಕೆಳಗಿರುವ ಬಡವರಿಗೆ ನಿವೇಶನ ಮತ್ತು ಮನೆಗಳನ್ನು ನೀಡಬೇಕು ಎಂದು ಒತ್ತಾಯಿಸಿ ಸಿಪಿಎಂ ಆಯೋಜಿಸಿದ್ದ ಹೋರಾಟದ ವೇದಿಕೆಗಳಲ್ಲಿ ಕೊಲ್ಲಂಪಲ್ಲಿ ವೆಂಕಟಸ್ವಾಮಿರೆಡ್ಡಿ ಸೇರಿದಂತೆ ಇತರ ಮುಖಂಡರು ಪಾಲ್ಗೊಂಡು ಭಾಷಣಗಳನ್ನು ಮಾಡಿದ್ದಾರೆ. ಆದರೆ ಈಗ ಸಿಪಿಎಂನವರು ರಾಜಕಾರಣ ಮಾಡುತ್ತಿದ್ದಾರೆ ಎಂದು ಆರೋಪಿಸುತ್ತಿದ್ದಾರೆ.ಸಿಪಿಎಂ ಜನರ ಸಮಸ್ಯೆಗಳನ್ನೇ ಕೇಂದ್ರವಾಗಿರಿಸಿಕೊಂಡು ಹೋರಾಟ ಮಾಡಿದೇ ಹೊರತು ಯಾವತ್ತು ಮತ ರಾಜಕಾರಣ ಮಾಡಿಲ್ಲ~ ಎಂದರು.`ವ್ಯಕ್ತಿಗಿಂತ ಪಕ್ಷದ ದೊಡ್ಡದು. ಸಿಪಿಎಂ ಹಿರಿಯ ನಾಯಕರಾಗಿ ದೀರ್ಘ ಕಾಲದವರೆಗೆ ಕೆಲಸ ಮಾಡಿ ಈಗ ಪಕ್ಷದ ಬಗ್ಗೆ ವ್ಯತಿರಿಕ್ತ ಹೇಳಿಕೆ ನೀಡುತ್ತಿರುವುದು ಸರಿಯಲ್ಲ. ಇದರ ಕುರಿತು ಜಿಲ್ಲಾ ಮತ್ತು ರಾಜ್ಯ ಕಾರ್ಯದರ್ಶಿ ಮಂಡಳಿಗೆ ಪತ್ರ ಬರೆಯಲಾಗಿದೆ. ಜಿಲ್ಲಾ ಮತ್ತು ಕಾರ್ಯದರ್ಶಿ ಮಂಡಳಿಯದ್ದೇ ಅಂತಿಮ ತೀರ್ಮಾನವಾಗಲಿದೆ~ ಎಂದು ತಿಳಿಸಿದರು.ಕೃಷಿ ಕೂಲಿಕಾರರ ಸಂಘ ತಾಲ್ಲೂಕು ಘಟಕದ ಅಧ್ಯಕ್ಷ ಬಿಳ್ಳೂರು ನಾಗರಾಜ್ ಮಾತನಾಡಿ, `ಜಿ.ಎನ್.ಶ್ರೀರಾಮಪ್ಪ ಅವರು ಉದ್ಯೋಗ ಖಾತ್ರಿ ಯೋಜನೆ ಬಿಲ್ಲುಗಳನ್ನು ತಮ್ಮ ಸ್ವಾರ್ಥಕ್ಕಾಗಿ ಬಳಸಿಕೊಂಡಿದ್ದಾರೆ. ಬಿಲ್ಲುಗಳಿಗೆ ತಾವೇ ಸಹಿ ಹಾಕಿಕೊಂಡು ಹಣ ಪಡೆದುಕೊಂಡಿದ್ದಾರೆ~ ಎಂದರು.ಡಿವೈಎಫ್‌ಐ ಜಿಲ್ಲಾ ಘಟಕದ ಅಧ್ಯಕ್ಷ ಚನ್ನರಾಯಪ್ಪ, ತಾಲ್ಲೂಕು ಘಟಕದ ಅಧ್ಯಕ್ಷ ರಘುರಾಮಿರೆಡ್ಡಿ, ಸಿಪಿಎಂ ತಾಲ್ಲೂಕು ಕಾರ್ಯದರ್ಶಿ ಮಂಡಳಿ ಸದಸ್ಯ ಶ್ರೀನಿವಾಸರೆಡ್ಡಿ, ಮುಖಂಡರಾದ ವೆಂಕಟಶಿವಾರೆಡ್ಡಿ, ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ವೆಂಕಟೇಶ್, ತಿಮ್ಮಂಪಲ್ಲಿ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ನಾರಾಯಣಪ್ಪ, ಯುವ ಮುಖಂಡ ಮಂಜುನಾಥರೆಡ್ಡಿ, ಆಂಜನೇಯರೆಡ್ಡಿ ಇದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.