ನವದೆಹಲಿ (ಪಿಟಿಐ): ಶ್ವಾಸಕೋಶದ ಸೋಂಕಿನಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದ ಭಾರತ ತಂಡದ ಮಾಜಿ ನಾಯಕ ಮನ್ಸೂರ್ ಅಲಿ ಖಾನ್ ಪಟೌಡಿ ಅವರ ಆರೋಗ್ಯ ಸ್ಥಿತಿಯಲ್ಲಿ ಈಗ ಸುಧಾರಣೆ ಆಗಿದೆ.

`ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ. ದೈಹಿಕ ಸ್ಥಿತಿಯಲ್ಲಿ ಸಾಕಷ್ಟು ಚೇತರಿಕೆ ಕಾಣಿಸಿದೆ. ಅವರು ಸಾಕಷ್ಟು ವಿಶ್ರಾಂತಿ ಪಡೆಯುವುದು ಅಗತ್ಯವಿದೆ. ನಿಧಾನವಾಗಿ ಅವರು ಚೇತರಿಕೆ ಕಾಣುತ್ತಿದ್ದಾರೆ ಎಂದು ಖಾಸಗಿ ಆಸ್ಪತ್ರೆಯ ವೈದ್ಯರು ಶನಿವಾರ ಸುದ್ದಿಗಾರರಿಗೆ ತಿಳಿಸಿದರು.

ತಮ್ಮ ತಂದೆ ಆಸ್ಪತ್ರೆಗೆ ದಾಖಲಾದ ವಿಷಯ ತಿಳಿದ ಬಾಲಿವುಡ್ ನಟ ಸೈಫ್ ಅಲಿ ಖಾನ್ ಅವರೂ ಮುಂಬೈನಿಂದ ಇಲ್ಲಿಗೆ ಆಗಮಿಸಿದ್ದಾರೆ. `ಟೈಗರ್ ಪಟೌಡಿ~ ಪತ್ನಿ ಶರ್ಮಿಳಾ ಠ್ಯಾಗೋರ್ ಅವರು ಕೂಡ ಈಗ ನವದೆಹಲಿಯಲ್ಲಿಯೇ ಇದ್ದಾರೆ.

ಭಾರತ ಕ್ರಿಕೆಟ್ ತಂಡವನ್ನು ಮುನ್ನಡೆಸಿದ ಅತ್ಯಂತ ವಿಶಿಷ್ಟ ವ್ಯಕ್ತಿತ್ವದ ನಾಯಕ ಎನ್ನುವ ಹಿರಿಮೆ ಹೊಂದಿರುವ ಪಟೌಡಿ 46 ಟೆಸ್ಟ್ ಆಡಿದ್ದು 34.91ರ ಸರಾಸರಿಯಲ್ಲಿ 2793 ರನ್ ಗಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.