ಗುರುವಾರ , ಮೇ 13, 2021
17 °C

ಪಟ್ಟಣ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚನ್ನಗಿರಿ: ಪಟ್ಟಣವನ್ನು ಸುಂದರವಾಗಿಸುವ ಉದ್ದೇಶದಿಂದ ಶಾಸಕರು ಕೋಟ್ಯಂತರ ಅನುದಾನವನ್ನು ತಂದು ಅಭಿವೃದ್ಧಿಪಡಿಸಿದ್ದಾರೆ. ಅವರ ಹಾಗೂ ಎಲ್ಲಾ ಸದಸ್ಯರ ಸಹಕಾರದೊಂದಿಗೆ ಪಟ್ಟಣದ ಅಭಿವೃದ್ಧಿಗೆ  ಶ್ರಮಿಸಲಾಗುವುದು ಎಂದು ನೂತನವಾಗಿ ಆಯ್ಕೆಯಾದ ಸ್ಥಾಯಿ ಸಮಿತಿ ಅಧ್ಯಕ್ಷ ರಾಜು ಕರಡೇರ್ ಹೇಳಿದರು.ಪಟ್ಟಣ ಪಂಚಾಯ್ತಿ ಸಭಾಂಗಣದಲ್ಲಿ ಅಧ್ಯಕ್ಷೆ ಪುಷ್ಪಲತಾ ಅವರ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ಸಾಮಾನ್ಯಸಭೆಯಲ್ಲಿ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ ಆಯ್ಕೆಯಾದ ಸಂದರ್ಭದಲ್ಲಿ ಅಭಿನಂದನೆ ಸ್ವೀಕರಿಸಿ ಅವರು ಮಾತನಾಡಿದರು.ಮೂರು ಅಥವಾ ಐದು ತಿಂಗಳಿಗೊಮ್ಮೆ  ಪ.ಪಂ. ಸಭೆ ನಡೆಸುತ್ತಿದ್ದು, ಪ್ರತಿತಿಂಗಳು ಸಭೆ ನಡೆಸುವುದನ್ನು ಪರಿಪಾಲಿಸುತ್ತಿಲ್ಲ. ವಾರ್ಡ್‌ಗಳಲ್ಲಿ ಸಮರ್ಪಕವಾಗಿ ಕಾಮಗಾರಿ ನಡೆಯುತ್ತಿಲ್ಲ. ಜನರ ಸಮಸ್ಯೆಗಳಿಗೆ ಸ್ಪಂದಿಸಲು ಸಾಧ್ಯವಾಗುತ್ತಿಲ್ಲ. ಆದ್ದರಿಂದ ಪ್ರತಿ ತಿಂಗಳು ಸಭೆಯನ್ನು ಕಡ್ಡಾಯವಾಗಿ ನಡೆಸಲೇಬೇಕು ಎಂದು ಪ್ರತಿಪಕ್ಷ ಸದಸ್ಯರಾದ ಫೈಜುನ್ನಿಸಾ, ಅಸ್ಲಾಂ ಬೇಗ್, ಆಡಳಿತ ಪಕ್ಷದ ಸದಸ್ಯರಾದ ಲಕ್ಷ್ಮೀ ರುದ್ರೋಜಿರಾವ್, ಡಿ. ಚಿಕ್ಕಣ್ಣ, ರಹಮತ್ ಉಲ್ಲಾ, ಬಷೀರ್ ಉನ್ನಿಸಾ, ಬತುಲಾಬೀ ಒತ್ತಾಯಿಸಿದರು.ಪಟ್ಟಣದಲ್ಲಿ ವಾರಕ್ಕೊಮ್ಮೆ ಕುಡಿಯುವ ನೀರನ್ನು ಪೂರೈಸಲಾಗುತ್ತಿದೆ. ಈ ಬಗ್ಗೆ ಪ.ಪಂ. ಮುಖ್ಯಾಧಿಕಾರಿ ಹಾಗೂ ಕೆಲಸಗಾರರು ಸದಸ್ಯರ ಮಾತಿಗೆ ಬೆಲೆ ನೀಡುತ್ತಿಲ್ಲ. ಆದ್ದರಿಂದ ಸಮರ್ಪಕವಾಗಿ ಕುಡಿಯುವ ನೀರನ್ನು ಸರಬರಾಜು ಮಾಡಲು ಕ್ರಮ ಕೈಗೊಳ್ಳಬೇಕೆಂದು ಉಪಾಧ್ಯಕ್ಷ ಕೆ.ಪಿ.ಎಂ. ಶಿವಲಿಂಗಯ್ಯ, ಎಲ್.ಎಂ. ರೇಣುಕಾ ಮುಂತಾದ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದರು.ಅಧ್ಯಕ್ಷೆ ಪುಷ್ಪಲತಾ ಉತ್ತರಿಸಿ, ಪ್ರತಿ ತಿಂಗಳು ಸಾಮಾನ್ಯ ಸಭೆ ನಡೆಯುವಂತೆ ನೋಡಿಕೊಳ್ಳಲಾಗುವುದು. ಕುಡಿಯುವ ನೀರಿನ ಸಮರ್ಪಕ ಸರಬರಾಜು ಬಗ್ಗೆ ಗಮನಹರಿಸಲಾಗುವುದು ಎಂದು ತಿಳಿಸಿದರು.ಮುಖ್ಯಾಧಿಕಾರಿ ಕೆ. ಪರಮೇಶ್ ಮುಂದಿನ ದಿನಗಳಲ್ಲಿ ಇ-ಟೆಂಡರ್ ಮೂಲಕ ಕಾಮಗಾರಿಗಳನ್ನು ಗುತ್ತಿಗೆ ನೀಡುವ ಪದ್ಧತಿ ಜಾರಿಗೊಳ್ಳಲಿದೆ. ಸದಸ್ಯರ ಅಹವಾಲುಗಳಿಗೆ ಸ್ಪಂದಿಸಲಾಗುವುದು ಎಂದು ಸಭೆಗೆ ಹೇಳಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.