ಬೆಂಗಳೂರು: `ಭಗವದ್ಗೀತೆಯನ್ನು ಶಾಲಾ ಪಠ್ಯಕ್ರಮದಲ್ಲಿ ಅಳವಡಿಸುವ ಸಂಬಂಧ ಶಿಕ್ಷಣ ತಜ್ಞರ ಜತೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು~ ಎಂದು ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡ ಹೇಳಿದರು.

ನಗರದಲ್ಲಿ ಸೋಮವಾರ ಆರಂಭವಾದ ರಾಜ್ಯದ ಹಿರಿಯ ಪೊಲೀಸ್ ಅಧಿಕಾರಿಗಳ ಸಮಾವೇಶದಲ್ಲಿ ಪಾಲ್ಗೊಂಡು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, `ಪಠ್ಯಕ್ರಮದಲ್ಲಿ ಭಗವದ್ಗೀತೆ ಅಳವಡಿಕೆ ಸಂಬಂಧ ಸದ್ಯದಲ್ಲೇ ಶಿಕ್ಷಣ ತಜ್ಞರೊಂದಿಗೆ ಸಭೆ ನಡೆಸಿ ಚರ್ಚಿಸಲಾಗುತ್ತದೆ. ಸಭೆಯಲ್ಲಿ ಮೂಡುವ ಅಭಿಪ್ರಾಯ ಆಧರಿಸಿ ಮುಂದಿನ ತೀರ್ಮಾನ ಕೈಗೊಳ್ಳಲಾಗುತ್ತದೆ~ ಎಂದು ತಿಳಿಸಿದರು.

ಶಾಲಾ ಪಠ್ಯಕ್ರಮದಲ್ಲಿ ಭಗವದ್ಗೀತೆಯನ್ನು ಅಳವಡಿಸುವ ಮೂಲಕ ಸರ್ಕಾರ ಶಿಕ್ಷಣ ವ್ಯವಸ್ಥೆಯನ್ನು ಕೇಸರೀಕರಣಗೊಳಿಸಲು ಪ್ರಯತ್ನಿಸುತ್ತಿದೆಯೇ ಎಂದು ಸುದ್ದಿಗಾರರು ಪ್ರಶ್ನಿಸಿದಾಗ, `ಆ ಬಗ್ಗೆ ಪ್ರತಿಕ್ರಿಯೆ ನೀಡುವುದಿಲ್ಲ~ ಎಂದರು. ಪಕ್ಷದಲ್ಲಿ ಸಣ್ಣಪುಟ್ಟ ಗೊಂದಲಗಳಿವೆ. ಆ ಗೊಂದಲಗಳು ನಿವಾರಣೆಯಾದ ಬಳಿಕ ಸಚಿವ ಸಂಪುಟ ವಿಸ್ತರಣೆ ಮಾಡಲಾಗುವುದು ಎಂದು ಸದಾನಂದಗೌಡ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.