ಪಠ್ಯಪುಸ್ತಕ ವಿತರಣೆ

ಬುಧವಾರ, ಜೂಲೈ 24, 2019
28 °C

ಪಠ್ಯಪುಸ್ತಕ ವಿತರಣೆ

Published:
Updated:

ರಾಜರಾಜೇಶ್ವರಿ ನಗರ: `ಬಡತನದಲ್ಲಿ ಹುಟ್ಟಿ ಬೆಳೆದ ಡಾ. ಅಬ್ದುಲ್ ಕಲಾಂ , ಸರ್ ಎಂ.ವಿಶ್ವೇಶ್ವರಯ್ಯ ಮುಂತಾದವರು ರಾಷ್ಟ್ರಕ್ಕೆ ಹಲವಾರು ಕೊಡುಗೆಗಳನ್ನು ನೀಡಿದ್ದಾರೆ. ವಿದ್ಯಾರ್ಥಿಗಳು ಅವರ ಹಾದಿಯಲ್ಲಿ ನಡೆಯಬೇಕು~ ಎಂದು ಶಾಲಾಭಿವೃದ್ಧಿ ಸಮಿತಿ ಉಪಾಧ್ಯಕ್ಷ ಕೆ.ಎಂ.ರಾಮಚಂದ್ರ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.ಕೆ.ಗೊಲ್ಲಹಳ್ಳಿ ಸರ್ಕಾರಿ ಪ್ರೌಢಶಾಲೆಯ ಮಕ್ಕಳಿಗೆ ಸಮವಸ್ತ್ರ, ಪಠ್ಯಪುಸ್ತಕ ವಿತರಣೆ ಮಾಡಿ ಮಾತನಾಡಿದ ಅವರು, ` ವಿದ್ಯಾವಂತರಾದಾಗ ಮಾತ್ರ ವಿಶ್ವದಲ್ಲಿ ಎಲ್ಲಿ ಬೇಕಾದರೂ ಜೀವನ ಸಾಗಿಸಬಹುದು. ಸರ್ಕಾರಿ ಶಾಲೆಯಲ್ಲಿ ಶಿಕ್ಷಣ ಪಡೆದ ಮಕ್ಕಳು ಹಲವು ರಂಗಗಳಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ದಾನಿಗಳು ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಮುಂದೆ ಬರಬೇಕಿದೆ~ ಎಂದರು.ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ಕೆ.ವಿ.ಕೃಷ್ಣಪ್ಪ, ಮುಖ್ಯ ಶಿಕ್ಷಕ ಮಲ್ಲಯ್ಯ, ಶಿಕ್ಷಕರಾದ ಎಸ್.ಎಲ್.ಕಳೀಮಠ, ಎಸ್.ಟಿ.ಮಧುರಾ, ಚಂದ್ರಿಕಾ, ನೂರಿನಾ ತಾಜ್, ತಹೀರಾ ಬೇಗಂ ಮಾತನಾಡಿದರು.288 ವಿದ್ಯಾರ್ಥಿಗಳಿಗೆ ಸಮವಸ್ತ್ರ, ಪಠ್ಯಪುಸ್ತಕ ವಿತರಿಸಲಾಯಿತು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry