`ಪಠ್ಯೇತರ ಚಟುವಟಿಕೆಗಳಲ್ಲೂ ಭಾಗಿಯಾಗಿ'

7

`ಪಠ್ಯೇತರ ಚಟುವಟಿಕೆಗಳಲ್ಲೂ ಭಾಗಿಯಾಗಿ'

Published:
Updated:

ಯಲಹಂಕ: `ಮಕ್ಕಳು ಶೈಕ್ಷಣಿಕ ಚಟುವಟಿಕೆಗಳ ಜೊತೆಗೆ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿಯೂ ತೊಡಗಿಸಿಕೊಂಡು ಪ್ರಗತಿ ಸಾಧಿಸುವ ಮೂಲಕ ಪರಿಪೂರ್ಣತೆಯನ್ನು  ಹೊಂದಬೇಕು' ಎಂದು ಜಿಲ್ಲಾ ಪಂಚಾಯ್ತಿ ಸದಸ್ಯ ದಾನೇಗೌಡ ಸಲಹೆ ನೀಡಿದರು.

ಬ್ಯಾಟರಾಯನಪುರ ಕ್ಷೇತ್ರ ವ್ಯಾಪ್ತಿಯ ಮಾರೇನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಎಸ್.ಎನ್.ಕ್ರಿಯಾಸಂಸ್ಥೆಯ ಸಹಯೋಗದಲ್ಲಿ ಈಚೆಗೆ ಆಯೋಜಿಸಿದ್ದ ಮರಳುಕುಂಟೆ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿಯ ಸಮಾರೋಪದಲ್ಲಿ ವಿಜೇತರಾದ ಮಕ್ಕಳಿಗೆ ಬಹುಮಾನ ವಿತರಿಸಿ ಅವರು ಮಾತನಾಡಿದರು.

ಗ್ರಾಮ ಪಂಚಾಯ್ತಿ ಅಧ್ಯಕ್ಷ ಆಂಜಿನಪ್ಪ ಮಾತನಾಡಿ, `ಮಕ್ಕಳು ತಮ್ಮ ಪ್ರತಿಭೆಯನ್ನು ತೋರ್ಪಡಿಸಲು ಇದೊಂದು ಉತ್ತಮ ವೇದಿಕೆ. ಇಂತಹ ಕಾರ್ಯಕ್ರಮಗಳಿಗೆ ಶಿಕ್ಷಕರು, ಪೋಷಕರು ಹಾಗೂ ಗ್ರಾಮಸ್ಥರು ಪ್ರೋತ್ಸಾಹ ನೀಡಬೇಕು' ಎಂದರು.

ಸಮಾಜಸೇವಕಿ ಮೀನಾಕ್ಷಿ ಶೇಷಾದ್ರಿ, ತಾಲ್ಲೂಕು ಪಂಚಾಯ್ತಿ ಸದಸ್ಯೆ ಬಾಲಮ್ಮ, ಬಾಗಲೂರು ಸರ್ಕಾರಿ ಪ್ರೌಢಶಾಲೆ ಹಾಗೂ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕರಾದ ವೆಂಕಟೇಶ್, ರಾಜೇಶ್ವರಿ, ಶಿಕ್ಷಣ ಸಂಯೋಜಕ ಜಗದೀಶ್, ಗ್ರಾಮ ಪಂಚಾಯ್ತಿ ಸದಸ್ಯ ಮುನಿಯಪ್ಪ, ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಮುನಿರಾಜು ಮೊದಲಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry