ಪಠ್ಯೇತರ ಚಟುವಟಿಕೆಗಳಿಗೆ ಆದ್ಯತೆ ನೀಡಿ

ಶನಿವಾರ, ಮೇ 25, 2019
33 °C

ಪಠ್ಯೇತರ ಚಟುವಟಿಕೆಗಳಿಗೆ ಆದ್ಯತೆ ನೀಡಿ

Published:
Updated:

ಶಿಗ್ಗಾಂವ: ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಿಗೆ ಆದ್ಯತೆ ನೀಡಿದಾಗ ಮಾತ್ರ ವಿದ್ಯಾರ್ಥಿಗಳ ಸರ್ವಾಂಗೀಣ ಅಭಿವೃದ್ಧಿಯಾಗಲು ಸಾಧ್ಯವಿದೆ ಎಂದು ಕಾಲೇಜು ಶಿಕ್ಷಣ ಇಲಾಖೆ ನಿವೃತ್ತ ಸಹಾಯಕ ನಿರ್ದೇಶಕ ವಿ.ಎಸ್. ಕಂಬಾಳಿಮಠ ಹೇಳಿದರು.ತಾಲ್ಲೂಕಿನ ಬಂಕಾಪುರ ಪಟ್ಟಣದ ನಾಡ ಶಿಕ್ಷಣ ಸಮಿತಿ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ  ನಡೆದ ಸಾಂಸ್ಕೃತಿಕ, ಕ್ರೀಡಾ ಹಾಗೂ ಎನ್‌ಎಸ್‌ಎಸ್ ಚಟುವಟಿಕೆ ಗಳ ಉದ್ಘಾಟನಾ ಸಮಾರಂಭವನ್ನು ಅವರು ಉದ್ಘಾಟಿಸಿ ಮಾತನಾಡಿದರು.ಧಾರವಾಡ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಮಾಜಶಾಸ್ತ್ರದ ಪ್ರಾಧ್ಯಾಪಕ ಎಸ್.ಬಿ.ಜೋಗೂರು ಮಾತನಾಡಿ, ಗ್ರಾಮೀಣ ಪ್ರದೇಶದಲ್ಲಿನ ವಿದ್ಯಾರ್ಥಿಗಳಲ್ಲಿ ಸಾಕಷ್ಟು ಪ್ರತಿಭೆ ಅಡಗಿದ್ದು, ಅದನ್ನು ಗುರುತಿಸಿ ಪ್ರೋತ್ಸಾಹಿಸುವ ಕಾರ್ಯ ಅಗತ್ಯವಾಗಿದೆ ಎಂದರು.ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಚಾರ್ಯ ನರಸಪ್ಪ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಇದೇ ಸಂದರ್ಭದಲ್ಲಿ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಹಾಗೂ ಎನ್‌ಎಸ್‌ಎಸ್ ಸ್ವಯಂ ಸೇವಕರಾಗಿ ಸೇವೆ ಸಲ್ಲಿಸಿದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪ್ರಮಾಣ ಪತ್ರ ವಿತರಿಸಲಾಯಿತು.ಎನ್‌ಎಸ್‌ಎಸ್ ಅಧಿಕಾರಿಗಳಾದ ಸಂತೋಷಕುಮಾರ. ಎಂ. ಕಟಕೆ, ಸಾಂಸ್ಕೃತಿಕ ಯಮುನಾ ಕೊಣೇಸರ, ಜಗದೀಶ ಚಂದ್ರಗಿರಿ, ತಾರಾಮತಿ ನಾಕೋಡ, ವಿಜಯ ಗುಡಿಗೇರಿ, ಶಾಂತ ಕುಮಾರಿ, ಎಂ.ಜಿ ರಂಗಣ್ಣನವರ, ಬಿ.ಸಿ. ಬಜ್ಜಿ, ಕೆ.ಪಿ.ಬೆಣಗೇರಿ, ವಿ.ಎಸ್. ಕುಲಕರ್ಣಿ, ಎನ್.ಎನ್. ನಾಯಕ ಮತ್ತಿತರರು ಉಪಸ್ಥಿತರಿದ್ದರು. ಮಮತಾ ತಳಳ್ಳಿ ಸಂಗಡಿಗರು ಪ್ರಾರ್ಥಿಸಿದರು. ಸುಜಾತಾ ಕಡ್ಲಿ ಸ್ವಾಗತಿಸಿ ದರು. ಕುಮಾರ ಎಂ ನಿರೂಪಿಸಿದರು. ಡಿ.ಎಸ್.ಸೊಗಲದ ವಂದಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry