`ಪಠ್ಯೇತರ ಚಟುವಟಿಕೆಯಲ್ಲಿ ಪಾಲ್ಗೊಳ್ಳಿ'

7

`ಪಠ್ಯೇತರ ಚಟುವಟಿಕೆಯಲ್ಲಿ ಪಾಲ್ಗೊಳ್ಳಿ'

Published:
Updated:

ಮುಳಬಾಗಲು: ವಿದ್ಯಾರ್ಥಿಗಳು ಪಠ್ಯೇತರ ಚಟುವಟಿಕೆಗಳಲ್ಲಿ ಪಾಲ್ಗೊಂಡು, ಉತ್ತಮ ಸಾಧನೆ ಪ್ರದರ್ಶಿಸಲಿ ಎಂದು ಶಾಸಕ ಅಮರೇಶ್ ಸಲಹೆ ನೀಡಿದರು.ಪಟ್ಟಣದ ಬಳೇ ಚಂಗಪ್ಪ ಸರ್ಕಾರಿ ಪ್ರೌಢಶಾಲೆಯಲ್ಲಿ ಮಂಗಳವಾರ ತಾಲ್ಲೂಕು ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮ ಉದ್ಘಾಟಿಸಿದ ಶಾಸಕರು ಮಾತನಾಡಿದರು.ಗ್ರಾಮೀಣ ಪ್ರದೇಶದ ಮಕ್ಕಳ ಪ್ರತಿಭೆಯನ್ನು ಶಿಕ್ಷಕರು ಗುರುತಿಸಿ ಪ್ರೋತ್ಸಾಹಿಸುವಂತೆ ಸೂಚಿಸಿದರು.ತಾಲ್ಲೂಕಿನ ಎಲ್ಲ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳ ಮೂರು ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಪ್ರತಿಭಾ ಕಾರಂಜಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಕೆ.ವಿ.ಜಗನ್ನಾಥ್, ಕಾರ್ಯದರ್ಶಿ ಎಂ.ಶಿವಣ್ಣ, ಖಜಾಂಚಿ ಜೆ.ಎಸ್.ಮಂಜುನಾಥ್, ಶಿಕ್ಷಣ ಸಂಯೋಜಕ ರಂಗಸ್ವಾಮಿ, ಮುಖ್ಯ ಶಿಕ್ಷಕ ಜಿ.ವೆಂಕಟರಾಮ್, ರಾಷ್ಟ್ರ ಉತ್ತಮ ಶಿಕ್ಷಕ ಪ್ರಶಸ್ತಿ ವಿಜೇತ ಎಸ್.ಜಯರಾಮ್ ಇತರರು ಭಾಗವಹಿಸಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry