ಪಡಿತರ ಚೀಟಿ: ತ್ವರಿತ ವಿಲೇವಾರಿಗೆ ಸೂಚನೆ

7

ಪಡಿತರ ಚೀಟಿ: ತ್ವರಿತ ವಿಲೇವಾರಿಗೆ ಸೂಚನೆ

Published:
Updated:

ಬೆಂಗಳೂರು: ಪಡಿತರ ಚೀಟಿಗಾಗಿ ಸಲ್ಲಿಸಿರುವ ಹೊಸ ಅರ್ಜಿಗಳನ್ನು ತ್ವರಿತವಾಗಿ ವಿಲೇವಾರಿ ಮಾಡಬೇಕು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ದಿನೇಶ್‌ ಗುಂಡೂರಾವ್‌ ಆದೇಶಿಸಿದರು.  ಮಂಗಳವಾರ ಆಹಾರ ಇಲಾಖೆಯ ಉಪ ನಿರ್ದೇಶಕರು ಹಾಗೂ ರಾಜ್ಯ ಆಹಾರ ನಿಗಮದ ಜಿಲ್ಲಾ ವ್ಯವಸ್ಥಾಪಕರ ಸಭೆಯಲ್ಲಿ ಅವರು, ಅರ್ಜಿ ವಿಲೇವಾರಿಯಲ್ಲಿ ವಿಳಂಬ ಮಾಡುತ್ತಿರುವ ಅಧಿಕಾರಿ ಗಳನ್ನು ತರಾಟೆಗೆ ತೆಗೆದುಕೊಂಡರು.ಬಿಪಿಎಲ್‌ ಕಾರ್ಡ್‌ಗಳ ಹಂಚಿಕೆಗೆ ಆದ್ಯತೆ ನೀಡಬೇಕು. ಜೊತೆಗೆ ಪ್ರತಿ ಜಿಲ್ಲಾ ಉಪ ನಿರ್ದೇಶಕರು ಹಾಗೂ ಆಹಾರ ನಿರೀಕ್ಷಕರು ಕಡ್ಡಾಯವಾಗಿ ನ್ಯಾಯಬೆಲೆ ಅಂಗಡಿಗಳಿಗೆ ಭೇಟಿ ನೀಡಿ ವಿತರಣಾ ವ್ಯವಸ್ಥೆಯನ್ನು ಪರಿಶೀಲನೆ ಮಾಡಬೇಕು ಎಂದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry