ಭಾನುವಾರ, ಮೇ 16, 2021
23 °C

ಪಡಿತರ ಚೀಟಿ ನೋಂದಣಿಗೆ ಹೆಚ್ಚು ಹಣ : ಕಂಪ್ಯೂಟರ್ ಕೇಂದ್ರಕ್ಕೆ ಬೀಗ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕೊಳ್ಳೇಗಾಲ: ಪಡಿತರ ಚೀಟಿ ನೋಂದಣಿಗೆ ನಿಗದಿಪಡಿಸಿದ ದರಕ್ಕಿಂತ ಹೆಚ್ಚಿನ ಹಣ ಪಡೆಯುತ್ತಿರುವ ಬಗ್ಗೆ ಗ್ರಾಹಕರು ನೀಡಿದ ದೂರಿನ ಮೇರೆಗೆ ಆಹಾರ ಇಲಾಖೆ ಅಧಿಕಾರಿಗಳು ಪಟ್ಟಣದ ಆರ್ಯ ಕಂಪ್ಯೂಟರ್ ಸೆಂಟರ್ ಮೇಲೆ ಗುರುವಾರ ದಾಳಿ ನಡೆಸಿ ಪರಿಶೀಲನೆ ನಡೆಸಿದರು.ಆರ್ಯ ಕಂಪ್ಯೂಟರ್ ಸೆಂಟರ್‌ನಲ್ಲಿ ಗ್ರಾಮೀಣ ಪ್ರದೇಶದ ಜನರಿಂದ ರೂ 100ರಿಂದ 300 ರೂಪಾಯಿವರೆಗೆ ಹಣ ಪಡೆಯಲಾಗುತ್ತಿದೆ ಎಂದು ಗ್ರಾಹಕರು ದೂರು ನೀಡಿದ್ದರು.ದೂರಿನ ಮೇರೆಗೆ ಆಹಾರ ಶಿರಸ್ತೇದಾರ್ ನಿಂಗರಾಜು ಮತ್ತು ಆಹಾರ ನಿರೀಕ್ಷಕ ಭೀಮಪ್ಪ ದಾಳಿ ನಡೆಸಿ ಪರಿಶೀಲನೆ ನಡೆಸಿದರು. ಅಲ್ಲದೆ, ಸ್ಥಳದಲ್ಲೇ ಇದ್ದ ಪಡಿತರ ಚೀಟಿದಾರರಿಂದ ಮಾಹಿತಿ ಪಡೆದರು. ಆರ್ಯ ಕಂಪ್ಯೂಟರ್ ಕೇಂದ್ರಕ್ಕೆ ಬೀಗ ಹಾಕಿಸಿ ಮುಂದಿನ ಕ್ರಮಕ್ಕೆ ಮೇಲಾಧಿಕಾರಿಗಳಿಗೆ ವರದಿ ನೀಡಲಾಗಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.