ಬುಧವಾರ, ಮೇ 25, 2022
22 °C

ಪಡಿತರ ಚೀಟಿ ವಿತರಣೆ: ಕೋರ್ಟ್ ಗಡುವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಕಡು ಬಡವರಿಗಾಗಿ ಮೀಸಲು ಇರುವ `ಅಂತ್ಯೋದಯ ಅನ್ನ ಯೋಜನೆ~ಯ ಅರ್ಹ ಫಲಾನುಭವಿಗಳನ್ನು ಗುರುತಿಸಿ ಅವರಿಗೆ ಪಡಿತರ ಚೀಟಿ ನೀಡಲು ಸರ್ಕಾರಕ್ಕೆ ಹೈಕೋರ್ಟ್ ಆಗಸ್ಟ್ 6ರವರೆಗೆ ಕಾಲಾವಕಾಶ ನೀಡಿ ಸೋಮವಾರ ಆದೇಶಿಸಿದೆ.ಈ ಆದೇಶ ಪಾಲನೆ ಸಂಬಂಧ ತೆಗೆದುಕೊಳ್ಳುವ ಕ್ರಮಗಳ ಬಗ್ಗೆ ಐದು ದಿನಗಳ ಒಳಗೆ ಮಾಹಿತಿ ನೀಡುವಂತೆ ಸರ್ಕಾರದ ಪರ ವಕೀಲರಿಗೆ ಮುಖ್ಯ ನ್ಯಾಯಮೂರ್ತಿ ವಿಕ್ರಮಜಿತ್ ಸೇನ್ ಹಾಗೂ ನ್ಯಾಯಮೂರ್ತಿ ಬಿ.ವಿನಾಗರತ್ನಾ ಅವರನ್ನು ಒಳಗೊಂಡ ವಿಭಾಗೀಯ ಪೀಠ ಸೂಚಿಸಿದೆ.ಮಾಸಿಕ ಒಂದು ಸಾವಿರ ರೂಪಾಯಿಗಳಿಗಿಂತ ಕಡಿಮೆ ಆದಾಯ ಹೊಂದಿರುವ ಕಡು ಬಡವರಿಗೆ ಪ್ರಯೋಜನ ಆಗಬೇಕಿರುವ ಈ ಯೋಜನೆಯ ಉಪಯೋಗವನ್ನು ಸಿರಿವಂತರೂ ಪಡೆದುಕೊಳ್ಳುತ್ತಿದ್ದಾರೆ ಎಂದು ದೂರಿ 2006ರಲ್ಲಿ  ಎಸ್. ಎ.ರಾಮದಾಸ್ (ಹಾಲಿ ಸಚಿವ) ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಪೀಠ ನಡೆಸುತ್ತಿದೆ. ವಿಚಾರಣೆಯನ್ನು ಮುಂದೂಡಲಾಗಿದೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.