ಬುಧವಾರ, ಜೂನ್ 16, 2021
21 °C

ಪಡಿತರ ಸಾಗಾಣಿಕೆ: ಸರ್ಕಾರದ ಹೊಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: ಸಾರ್ವಜನಿಕ ವಿತರಣಾ ವ್ಯವಸ್ಥೆಯ ಅಡಿಯಲ್ಲಿ ವಿತರಿಸುವ ಪಡಿತರ ಸಾಗಣೆಯನ್ನು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಸಂಸ್ಥೆಗಳ ಮೂಲಕವೇ ನಿರ್ವಹಿಸುವ ಪ್ರಾಯೋಗಿಕ ಯೋಜನೆಯನ್ನು ಮುಂದಿನ (2012-13) ಸಾಲಿನಲ್ಲಿ ಜಾರಿಗೆ ತರುವುದಾಗಿ ಘೋಷಿಸಲಾಗಿದೆ.ಪ್ರಸ್ತುತ ಪಡಿತರ ಸಾಗಾಣಿಕೆ ಜವಾಬ್ದಾರಿಯನ್ನು ಗುತ್ತಿಗೆದಾರರು ನೀಡಲಾಗುತ್ತಿದೆ. ಅದನ್ನು ನ್ಯಾಯಬೆಲೆ ಅಂಗಡಿಗಳ ಮುಖ್ಯಸ್ಥರಿಗೆ ನೀಡುವ ಹೊಸ ಪದ್ಧತಿ ಜಾರಿಗೊಳಿಸುವ ಪ್ರಯತ್ನ ಪ್ರಗತಿಯಲ್ಲಿತ್ತು. ಈಗ ಸರ್ಕಾರಿ ಸಂಸ್ಥೆಗಳ ಮೂಲಕವೇ ಸಾಗಾಣಿಕೆ ಮಾಡುವ ಯೋಜನೆಯನ್ನು ಪ್ರಾಯೋಗಿಕವಾಗಿ ಕೈಗೆತ್ತಿಕೊಳ್ಳುವ ಘೋಷಣೆ ಬಜೆಟ್‌ನಲ್ಲಿ ಹೊರಬಿದ್ದಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.