ಶುಕ್ರವಾರ, ನವೆಂಬರ್ 22, 2019
24 °C

ಪತಿ ಹಾಗೂ ಸಂಬಂಧಿಕರಿಂದ ಮಹಿಳೆ ಮೇಲೆ ಅತ್ಯಾಚಾರ

Published:
Updated:

ನವದೆಹಲಿ (ಐಎಎನ್‌ಎಸ್): ಚಲಿಸುತ್ತಿದ್ದ ಕಾರಿನಲ್ಲಿ 20 ವರ್ಷದ ಮಹಿಳೆಯ ಮೇಲೆ ಆಕೆಯ ಪತಿ ಹಾಗೂ ಆತನ ಇಬ್ಬರು ಸಂಬಂಧಿಕರು ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ಪಶ್ಚಿಮ ದೆಹಲಿಯಲ್ಲಿ ಬುಧವಾರ ನಡೆದಿದೆ.ಇಲ್ಲಿನ ನಜಫ್‌ಗಡ ಪ್ರದೇಶದಲ್ಲಿ ಬುಧವಾರ ಸಂಜೆ ಮಹಿಳೆಯೊಬ್ಬರು ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದ ಬಗ್ಗೆ ದಾರಿಹೋಕರು ಪೊಲೀಸರಿಗೆ ಮಾಹಿತಿ ನೀಡಿದಾಗ ಪ್ರಕರಣ ಬೆಳಕಿಗೆ ಬಂದಿದೆ.ಪತಿ ಇಂದ್ರಜಿತ್ ಹಾಗೂ ಅವರ ಇಬ್ಬರು ಸಂಬಂಧಿಕರಾದ ನಿತಿನ್, ವಿಜೇಂದರ್ ತಮ್ಮ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿರುವುದಾಗಿ ಮಹಿಳೆ ಪೊಲೀಸರಿಗೆ ದೂರು ನೀಡಿದ್ದಾರೆ. ಹರಿಯಾಣ ಝಜ್ಜರ್ ಜಿಲ್ಲೆಯ ಈ ಮಹಿಳೆ ಕಳೆದ ತಿಂಗಳು ದೇವಸ್ಥಾನದಲ್ಲಿ ಇಂದ್ರಜಿತ್ ಜತೆ ವಿವಾಹ ವಾಗಿದ್ದರು. ಆದರೆ ಆಕೆ ಈ ವಿಷಯವನ್ನು ತಮ್ಮ ಪೋಷಕರಿಗೆ ತಿಳಿಸಿರಲಿಲ್ಲ.ಮಹಿಳೆ ಸಾಮೂಹಿಕ ಅತ್ಯಾಚಾರಕ್ಕೆ ಒಳಗಾಗಿ ರುವುದನ್ನು  ಇಲ್ಲಿನ ಆಸ್ಪತ್ರೆ ವೈದ್ಯರು ದೃಢಪಡಿಸಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ. ಮಹಿಳೆ ನೀಡಿದ ದೂರು ಆಧರಿಸಿ ಎಲ್ಲ ಆರೋಪಿಗಳನ್ನು ಗುರುವಾರ ಬಂಧಿಸಲಾಗಿದೆ.

ಪ್ರತಿಕ್ರಿಯಿಸಿ (+)