ಸೋಮವಾರ, ಮೇ 25, 2020
27 °C

ಪತ್ನಿಗೆ ಕಿರುಕುಳ: ರಾಜತಾಂತ್ರಿಕ ಅಧಿಕಾರಿ ವರ್ಮಾ ವರ್ಗ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ (ಪಿಟಿಐ): ಪತ್ನಿಯ ಮೇಲೆ ಹಲ್ಲೆ ಮಾಡಿದ ಆಪಾದನೆ ಎದುರಿಸುತ್ತಿರುವ ಲಂಡನ್‌ನ ಭಾರತೀಯ ರಾಯಭಾರ ಕಚೇರಿಯ ಹಿರಿಯ ರಾಜತಾಂತ್ರಿಕ ಅಧಿಕಾರಿ ಅನಿಲ್ ವರ್ಮಾ ಅವರನ್ನು ದೆಹಲಿಗೆ ವರ್ಗಾಯಿಸಲಾಗಿದೆ.ಪಶ್ಚಿಮಬಂಗಾಳ ಕೇಡರಿನ ಐಎಎಸ್ ಅಧಿಕಾರಿಯಾಗಿರುವ ವರ್ಮಾ ಹಿರಿಯ ರಾಜತಾಂತ್ರಿಕ ಅಧಿಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದು, ಪತ್ನಿಯ ಮೇಲೆ ಹಲ್ಲೆ ಮಾಡಿ ಗಾಯಗೊಳಿಸಿದ್ದಾರೆ.

ವರ್ಮಾ ಅವರ ವಿರುದ್ಧ ವಿಚಾರಣೆ ನಡೆಯಲಿದ್ದು, ಅದರ ಆಧಾರದ ಮೇಲೆ ಕ್ರಮ ತೆಗೆದುಕೊಳ್ಳುವ ಸಾಧ್ಯತೆಗಳಿವೆ. ಕಳೆದ ಡಿಸೆಂಬರ್ 11ರಂದು ವರ್ಮಾ ಅವರು ಪತ್ನಿ ಪರೊಮಿತ ಅವರ ಮೇಲೆ ಹಲ್ಲೆ ಮಾಡಿದಾಗ ಅವರ ಮೂಗಿನಿಂದ ರಕ್ತ ಒಸರುತ್ತಿತ್ತು ಹಾಗೂ ಬಟ್ಟೆಯಲ್ಲಿ ರಕ್ತದ ಕಲೆಯಾಗಿತ್ತು. ಅವರು ನೋವು ತಾಳಲಾರದೆ ಕಿರುಚಿಕೊಳ್ಳುತ್ತಿದ್ದರು ಎಂದು ‘ಡೈಲಿ ಮೇಲ್’ ವರದಿ ಮಾಡಿತ್ತು.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.