ಪತ್ನಿ ಕೊಲೆ ಮಾಡಿ ಟೆಕ್ಕಿ ಆತ್ಮಹತ್ಯೆ

7

ಪತ್ನಿ ಕೊಲೆ ಮಾಡಿ ಟೆಕ್ಕಿ ಆತ್ಮಹತ್ಯೆ

Published:
Updated:

ಬೆಂಗಳೂರು: ಮಧುಸೂದನ್‌ (36) ಎಂಬ ಸಾಫ್ಟ್‌ವೇರ್‌ ಎಂಜಿನಿಯರ್‌, ಪತ್ನಿ ರೂಪಾ (32) ಅವರನ್ನು ಚಾಕುವಿನಿಂದ ಇರಿದು ಕೊಲೆ ಮಾಡಿ ನಂತರ ತಾನೂ ಕಟ್ಟಡದ 13ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜೆ.ಪಿ.ನಗರದ 24ನೇ ಅಡ್ಡರಸ್ತೆಯಲ್ಲಿ ಶುಕ್ರವಾರ ರಾತ್ರಿ ನಡೆದಿದೆ.ಮಧುಸೂದನ್‌, ನಗರದ ಸಾಫ್ಟ್‌ವೇರ್‌ ಕಂಪೆನಿಯೊಂದರಲ್ಲಿ ಎಂಜಿನಿಯರ್‌ ಆಗಿದ್ದರು. ರೂಪಾ ಕೂಡ ವೆಂಕಟಾದ್ರಿಲೇಔಟ್‌ನಲ್ಲಿರುವ ಸಾಫ್ಟ್‌ವೇರ್‌ ಕಂಪೆನಿಯೊಂದರಲ್ಲಿ ಉದ್ಯೋಗಿಯಾಗಿದ್ದರು. ದಂಪತಿಗೆ ಐದು ವರ್ಷದ ಸುರಭಿ ಎಂಬ ಹೆಣ್ಣು ಮಗುವಿದೆ. ಕುಟುಂಬ ಸದಸ್ಯರು ಜೆ.ಪಿ,ನಗರದ ಶೋಭಾ ಅಪಾರ್ಟ್‌ ಮೆಂಟ್‌ನ 13ನೇ ಮಹಡಿಯಲ್ಲಿ ವಾಸವಾಗಿದ್ದರು.ರಾತ್ರಿ 9.45ರ ಸುಮಾರಿಗೆ ದಂಪತಿ ನಡುವೆ ಜಗಳವಾಗಿದೆ. ಪರಿಸ್ಥಿತಿ ವಿಕೋಪಕ್ಕೆ ತಿರುಗಿದಾಗ ಮಧು ಸೂದನ್, ಪತ್ನಿಗೆ ಹಲವು ಬಾರಿ ಚಾಕು ವಿನಿಂದ ಇರಿದಿದ್ದಾರೆ. ತೀವ್ರ ರಕ್ತಸ್ರಾವ ವಾಗಿ ರೂಪ ಸ್ಥಳದಲ್ಲೇ ಸಾವನ್ನಪ್ಪಿ ದ್ದಾರೆ. ನಂತರ ಮನೆಯಿಂದ ಹೊರ ಬಂದ ಅವರು ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಸಂದರ್ಭದಲ್ಲಿ ಸುರಭಿ, ಜೆ.ಪಿ.ನಗರದ ಎರಡನೇ ಹಂತದಲ್ಲಿರುವ ಅಜ್ಜಿ ಮನೆಯಲ್ಲಿದ್ದಳು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.‘ಶುಕ್ರವಾರ ರೂಪಾ ಅವರ ತಂದೆ ವಿಜಯೇಂದ್ರ ಅವರ ಹುಟ್ಟು ಹಬ್ಬವಿತ್ತು. ಹೀಗಾಗಿ ದಂಪತಿ ಅಲ್ಲಿಗೆ ಹೋಗಬೇಕಿತ್ತು. ಆದರೆ, ಆಚರಣೆಯಲ್ಲಿ ಪಾಲ್ಗೊಳ್ಳುವ ವಿಚಾರವಾಗಿ ದಂಪತಿ ನಡುವೆ ಜಗಳವಾಗಿದೆ ಎಂದು ತಿಳಿದು ಬಂದಿದೆ. ಪತ್ನಿಯನ್ನು ಕೊಲೆ ಮಾಡಿದ ಬಳಿಕ ಮಧುಸೂದನ್‌ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿದ್ದಾರೆ. ಆದರೆ, ಹಗ್ಗ ತುಂಡಾಗಿದ್ದರಿಂದ ಅವರು ಮೈಮೇಲೆ ಸೀಮೆಎಣ್ಣೆ ಸುರಿದುಕೊಂಡು ಬೆಂಕಿ ಹಚ್ಚಿಕೊಳ್ಳಲು ಯತ್ನಿಸಿ ವಿಫಲರಾಗಿದ್ದಾರೆ. ಅಂತಿಮವಾಗಿ ಅವರು ಕಟ್ಟಡದಿಂದ ಜಿಗಿದಿದ್ದಾರೆ’ ಎಂದು ದಕ್ಷಿಣ ವಿಭಾಗದ ಡಿಸಿಪಿ ಎಚ್‌.ಎಸ್‌.ರೇವಣ್ಣ ‘ಪ್ರಜಾವಾಣಿ’ಗೆ ತಿಳಿಸಿದರು.‘ದಂಪತಿ ನಡುವೆ ಅನ್ಯೋನ್ಯತೆ ಇರಲಿಲ್ಲ. ಸಣ್ಣಪುಟ್ಟ ವಿಚಾರಕ್ಕೂ ಅವರ ನಡುವೆ ಜಗಳವಾಗುತ್ತಿತ್ತು. ಹಲವು ಬಾರಿ ಮಧ್ಯಪ್ರವೇಶಿಸಿ ಸಮಾಧಾನಪಡಿಸಿದ್ದೆವು’ ಎಂದು ಇಬ್ಬರ ಪೋಷಕರೂ ಪೊಲೀಸರಿಗೆ ಹೇಳಿಕೆ ನೀಡಿದ್ದಾರೆ. ಜೆ.ಪಿ.ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry