ಮಂಗಳವಾರ, ಏಪ್ರಿಲ್ 20, 2021
26 °C

ಪತ್ರಕರ್ತನ ಬಂಧನ: ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಗುಲ್ಬರ್ಗ: ಮಂಗಳೂರು ಹೋಂ ಸ್ಟೇ ದಾಳಿಯನ್ನು ಚಿತ್ರೀಕರಿಸಿದ ಆರೋಪದ ಮೇಲೆ ವರದಿಗಾರ ನವೀನ್ ಶೆಟ್ಟಿ ಸೂರಿಂಜೆ ಅವರನ್ನು ಪೊಲೀಸರು ಬಂಧಿಸಿರುವುದನ್ನು ಖಂಡಿಸಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.ಬಳಿಕ ಜಿಲ್ಲಾಧಿಕಾರಿ ಕಾರ್ಯಾಲಯದಲ್ಲಿ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದ ಪತ್ರಕರ್ತರು, ಬಂಧಿತ ನವೀನ್ ಶೆಟ್ಟಿಯನ್ನು ಕೂಡಲೇ ಬೇಷರತ್ ಆಗಿ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದರು.  `ಮಾಧ್ಯಮಗಳನ್ನು ಹತ್ತಿಕ್ಕಲು ಯತ್ನಿಸುತ್ತಿರುವ ಸರ್ಕಾರವು ವರದಿಗೆ ತೆರಳಿದವರ ಮೇಲೆ ಮೊಕದ್ದಮೆ ದಾಖಲಿಸುತ್ತಿದೆ. ಈ ಘಟನೆಗಳು ಇತ್ತೀಚೆಗೆ ಹೆಚ್ಚಿವೆ. ಪತ್ರಕರ್ತರ ಕೆಲಸದ ಸ್ವಾತಂತ್ಯ್ರವನ್ನು ದಮನ ಮಾಡುತ್ತಿದೆ. ಇಂತಹ ಬೆಳವಣಿಗೆಗಳು ಖಂಡನೀಯ~ ಎಂದು ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಹಿರಿಯ ಪತ್ರಕರ್ತ ಟಿ.ವಿ. ಶಿವಾನಂದನ್ ಹೇಳಿದರು.`ಸಾಮಾಜಿಕ ಬದ್ಧತೆಯಿಂದ ವರದಿ ಮಾಡುವ ಪತ್ರಕರ್ತರನ್ನು ಆರೋಪಿಯನ್ನಾಗಿ ಮಾಡುವ ಪ್ರಸಂಗಗಳು ಈಚೆಗೆ ಹೆಚ್ಚಿವೆ. ಪದೇ ಪದೇ ಪತ್ರಕರ್ತರನ್ನು ದೋಷಿಗಳನ್ನಾಗಿ ಮಾಡಲಾಗುತ್ತಿದೆ. ಇಂತಹ ಘಟನೆಗಳು ಮರುಕಳಿಸಿದಲ್ಲಿ ಪತ್ರಕರ್ತರು ಒಗ್ಗಟ್ಟಾಗಿ ಉಗ್ರ ಹೋರಾಟ ನಡೆಸಲಿದ್ದಾರೆ~ ಎಂದು ಪತ್ರಕರ್ತ ಸುರೇಶ್ ಬಿ.ವಿ. ಎಚ್ಚರಿಸಿದರು. `ಬೀದರ್‌ನಲ್ಲಿ ವರದಿಗಾರ ಪರಶುರಾಮ ಎಂಬವರ ಮೇಲೆ ಕೇಸು ಹಾಕಿದರು. ಈಗ ಮಂಗಳೂರು. ಇದೇ ರೀತಿ ಅಲ್ಲಲ್ಲಿ ಪತ್ರಕರ್ತರ ಸ್ವಾತಂತ್ರ್ಯ ಹರಣ ನಡೆಯುತ್ತಿದೆ. ಮುಖ್ಯಮಂತ್ರಿ ಹಾಗೂ ಗೃಹಸಚಿವರು ಈ ಬೆಳವಣಿಗೆಯನ್ನು ಗಂಭೀರವಾಗಿ ಪರಿಗಣಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು.ಪತ್ರಕರ್ತರ ಕರ್ತವ್ಯ ನಿರ್ವಹಣೆ ಸ್ವಾತಂತ್ರ್ಯ ಕಾಪಾಡಲು ಸೂಕ್ತ ಕಾನೂನು ರೂಪಿಸಬೇಕು. ಇಲ್ಲದಿದ್ದಲ್ಲಿ ಮುಂದಿನ ದಿನಗಳಲ್ಲಿ ಪರಿಣಾಮ ಎದುರಿಸಬೇಕಾಗುತ್ತದೆ~ ಎಂದು ಪತ್ರಕರ್ತರ ಸಂಘದ ಅಧ್ಯಕ್ಷ ಬಾಬುರಾವ ಯಡ್ರಾಮಿ ಹೇಳಿದರು. ವಿವಿಧ ಪತ್ರಿಕೆಗಳು ಹಾಗೂ ಟಿವಿ ಮಾಧ್ಯಮಗಳ ಪತ್ರಕರ್ತರು, ಕ್ಯಾಮರಾಮೆನ್ ಇದ್ದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.