ಬುಧವಾರ, ಜೂನ್ 23, 2021
30 °C

ಪತ್ರಕರ್ತರಿಗೆ ಸೌಲಭ್ಯ: ಮನವಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಗುಲ್ಬರ್ಗ:  ರಾಜ್ಯ ಮುಂಗಡಪತ್ರದಲ್ಲಿ ಪತ್ರಕರ್ತರಿಗೆ ಸೌಲಭ್ಯಗಳನ್ನು ಕಲ್ಪಿಸಬೇಕು ಎಂದು ಉತ್ತರ ಕರ್ನಾಟಕ ಜಿಲ್ಲಾ ದಿನಪತ್ರಿಕೆಗಳ ಸಂಪಾದಕರ ಸಂಘದ ಅಧ್ಯಕ್ಷ ಪಿ.ಎಂ. ಮಣ್ಣೂರ ಮುಖ್ಯಮಂತ್ರಿ ಡಿ.ವಿ. ಸದಾನಂದಗೌಡ ಅವರಿಗೆ ಪತ್ರ ಬರೆದು ಒತ್ತಾಯಿಸಿದ್ದಾರೆ.ಸಣ್ಣ ಮತ್ತು ಮಧ್ಯಮ ಪತ್ರಿಕೆಗಳ ಅಭಿವೃದ್ಧಿ ಹಾಗೂ ಅವುಗಳ ರಕ್ಷಣೆಗಾಗಿ ಪಿ. ರಾಮಯ್ಯ ಅವರ ನೇತೃತ್ವದ ಸಮಿತಿ ನೀಡಿದ ವರದಿಯನ್ನು ಅನುಷ್ಠಾನಗೊಳಿಸಬೇಕು. ಪತ್ರಕರ್ತರ ಮಾಸಾಶನವನ್ನು ಐದು ಸಾವಿರ ರೂಪಾಯಿಗೆ ಹೆಚ್ಚಿಸಬೇಕು. ಪತ್ರಕರ್ತರ ನಿಧನದ ನಂತರ ಮಾಸಾಶನವನ್ನು ಅವರ ಧರ್ಮಪತ್ನಿಗೆ ನೀಡಬೇಕು.ಜಿಲ್ಲಾ ಮಟ್ಟದ ಪತ್ರಿಕೆಗಳಿಗೆ ತಿಂಗಳಿಗೆ ಕನಿಷ್ಠ ಒಂದು ಲಕ್ಷ ರೂಪಾಯಿ ಸರ್ಕಾರಿ ಜಾಹೀರಾತು ನೀಡಬೇಕು. ಪ್ರಾದೇಶಿಕ ಪತ್ರಿಕೆಗಳಿಗೆ ತಿಂಗಳಿಗೆ ಮೂರು ಲಕ್ಷ ರೂಪಾಯಿ ಜಾಹೀರಾತು ನೀಡಬೇಕು. ಪತ್ರಿಕಾ ಅಕಾಡೆಮಿ ಹಾಗೂ ಇತರೆ ಸಂಸ್ಥೆಗಳಿಗೆ ಸದಸ್ಯರನ್ನು ನೇಮಕ ಮಾಡುವಾಗ ಜಿಲ್ಲಾವಾರು ಪ್ರಾತಿನಿಧ್ಯ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.