ಮೈಸೂರು: ಬೆಂಗಳೂರಿನ ಸಿವಿಲ್ ಕೋರ್ಟ್ ಆವರಣದಲ್ಲಿ ಮಾಧ್ಯಮ ಪ್ರತಿನಿಧಿಗಳ ಮೇಲೆ ವಕೀಲರು ನಡೆಸಿರುವ ಹಲ್ಲೆಯ ಹಿಂದೆ ಜಾತ್ಯತೀತ ಜನತಾದಳದ ಕೈವಾಡ ಇದೆ ಎಂದು ಸಂಸದ ಅಡಗೂರು ಎಚ್.ವಿಶ್ವನಾಥ್ ಆರೋಪಿಸಿದ್ದಾರೆ.

ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಘಟನೆಗೆ ಸಂಬಂಧಿಸಿದಂತೆ ದಿಕ್ಕು ತಪ್ಪಿಸುವ ಹೇಳಿಕೆ ನೀಡುತ್ತಿದ್ದಾರೆ. ಬಳ್ಳಾರಿಯಿಂದ ಬಂದವರು ಕರಿ ಕೋಟ್ ಧರಿಸಿ ಗಲಾಟೆ ನಡೆಸಿದ್ದಾರೆ ಎಂಬ ಹೇಳಿಕೆ ವಕೀಲರ ಪುಂಡಾಟಿಕೆಯನ್ನು ಸಮರ್ಥನೆ ಮಾಡುವಂತಿದೆ. ಕಾನೂನು ಮತ್ತು ಸುವ್ಯವಸ್ಥೆ ಹಾಳುಗೆಡುತ್ತಿರುವುದೇ ಜೆಡಿಎಸ್. ಬೆಂಗಳೂರು ನಗರ ಪೊಲೀಸ್ ಆಯುಕ್ತ ಜ್ಯೋತಿ ಪ್ರಕಾಶ್ ಮಿರ್ಜಿ ಅವರನ್ನು ಎತ್ತಂಗಡಿ ಮಾಡಿಸುವ ಸಲುವಾಗಿಯೇ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಕುಟುಂಬ ವರ್ಗದವರೇ ವಕೀಲರ ಮೂಲಕ ಮಾಧ್ಯಮ ಪ್ರತಿನಿಧಿಗಳ ಮೇಲೆ ಹಲ್ಲೆ ನಡೆಸಲು ಪ್ರಚೋದನೆ ನೀಡಿದ್ದಾರೆ ಎಂದು ಭಾನುವಾರ ಪತ್ರಿಕಾಗೋಷ್ಠಿಯಲ್ಲಿ ಆರೋಪಿಸಿದರು.

ಘಟನೆ ನಡೆದು ಮೂರು ಗಂಟೆ ಯಾದರೂ ವಕೀಲರ ವಿರುದ್ಧ ಕ್ರಮ ಕೈಗೊಳ್ಳಲು ಗೃಹ ಸಚಿವರು ಆದೇಶ ನೀಡಲಿಲ್ಲ. ಬಂಧನಕ್ಕೆ ಒಳಗಾಗಿರುವ ಬೆಂಗಳೂರು ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಎ.ಪಿ. ರಂಗನಾಥ್ ಹಾಗೂ ದೇವೇಗೌಡರಿಗೂ ಯಾವುದೇ ಸಂಬಂಧ ಇಲ್ಲ ಎಂಬುದನ್ನು ಸಾಬೀತು ಪಡಿಸಲಿ.

ಹಿಂದೆ ಬೆಂಗಳೂರಿನಲ್ಲಿ ನಡೆದ ಘಟನೆಗಳಲ್ಲಿ ರಂಗನಾಥ್ ಭಾಗಿಯಾಗಿದ್ದರೂ ಯಾವುದೇ ಕ್ರಮ ಕೈಗೊಳ್ಳಲಿಲ್ಲ. ಸತ್ಯವನ್ನು ಸಾಯಿಸಲು ನ್ಯಾಯಾಂಗ ತನಿಖೆ ನಾಟಕ ಆರಂಭವಾಗಿದ್ದು, ನಿರಪರಾಧಿಗಳನ್ನು ಅಪರಾಧಿ ಸ್ಥಾನದಲ್ಲಿ ನಿಲ್ಲಿಸುವ ಹುನ್ನಾರ ಅಡಗಿದೆ.

ಘಟನೆಗೆ ಸಂಬಂಧಿಸಿದಂತೆ ಸಮರ್ಥ ಅಧಿಕಾರಿಗಳಿಂದ ತನಿಖೆ ನಡೆಸಬೇಕು. ಮುಖ್ಯಮಂತ್ರಿ ಸದಾನಂದಗೌಡರಿಗೆ ತಾಕತ್ತಿದ್ದರೆ ಬೆಂಗಳೂರು ವಕೀಲರ ಸಂಘಕ್ಕೆ ಪತ್ರ ಬರೆದು ಬಂಧಿತ ವಕೀಲರನ್ನು ವಜಾಗೊಳಿಸಲು ಕ್ರಮ ಕೈಗೊಳ್ಳಲಿ ಎಂದು ಸವಾಲು ಹಾಕಿದರು.

ಪತ್ರಕರ್ತರ ಪರ ವಕಾಲತ್ತು ವಹಿಸುವುದಿಲ್ಲ ಎಂದು ಶಿವಮೊಗ್ಗದಲ್ಲಿ ಹೇಳಿಕೆ ನೀಡಿರುವ ವಕೀಲರ ಸಂಘಟನೆ ತಾಲಿಬಾನ್ ಸಂಘಟನೆಯೇ ಎಂದು ಪ್ರಶ್ನಿಸಿದರು. ವಿಶ್ವನಾಥ್ ಲೌಡ್ ಸ್ಪೀಕರ್ ಎಂಬ ಸಿಎಂ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ನಾನು ಲೌಡ್ ಸ್ಪೀಕರ್ ಇರಬಹುದು ಆದರೆ ಸದಾನಂದಗೌಡರು ದೇವೇಗೌಡರ ಗ್ರಾಮಫೋನ್ ಎಂದು ವ್ಯಂಗ್ಯವಾಡಿದರು.

ಗ್ರಾಮ ಪಂಚಾಯಿತಿ ಬಿಲ್ ಕಲೆಕ್ಟರ್ಗಳಿಗೆ ಆರು ತಿಂಗಳಿನಿಂದ ಸಂಬಳ ನೀಡಿಲ್ಲ. ಅಂಗನವಾಡಿ ಕಾರ್ಯ ಕರ್ತೆಯರಿಗೆ ಎರಡು ತಿಂಗಳಿಗೊಮ್ಮೆ ಸಂಬಳ ನೀಡಲಾಗುತ್ತಿದೆ. ಪರಿಸ್ಥಿತಿ ಹೀಗಿರುವಾಗ ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಮೈಸೂರಿನಲ್ಲಿ ಸವಲತ್ತುಗಳ ಸಂತೆ ಕಾರ್ಯಕ್ರಮ ನಡೆಸುವ ಅಗತ್ಯವೇನಿತ್ತು?
ಕಾರ್ಯಕ್ರಮಗಳಿಗೆ ಫಲಾನುಭವಿಗಳು ಬಾರದೆ ಇದ್ದ ಪ್ರದೇಶಗಳಲ್ಲಿ ನೀರು, ವಿದ್ಯುತ್ ಕಡಿತ ಮಾಡಲಾಗಿದೆ ಎಂದು ಕಿಡಿಕಾರಿದರು.

ಪತ್ರಿಕಾಗೋಷ್ಠಿಯಲ್ಲಿ ಶಾಸಕ ತನ್ವೀರ್ ಸೇಟ್, ನಗರ ಕಾಂಗ್ರೆಸ್ ಅಧ್ಯಕ್ಷ ಸಿ.ದಾಸೇಗೌಡ, ವಕೀಲ ಎಚ್.ಎ.ವೆಂಕಟೇಶ್ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.