ಪತ್ರಕರ್ತರ ವಿರುದ್ಧ ಕ್ರಿಮಿನಲ್ ವಿಚಾರಣೆ ಮನವಿಗೆ ನಕಾರ

7

ಪತ್ರಕರ್ತರ ವಿರುದ್ಧ ಕ್ರಿಮಿನಲ್ ವಿಚಾರಣೆ ಮನವಿಗೆ ನಕಾರ

Published:
Updated:

ನವದೆಹಲಿ (ಪಿಟಿಐ): ಸಂಸತ್ತಿನಲ್ಲಿ 2005ರಲ್ಲಿ ಪ್ರಶ್ನೆ ಕೇಳಲು ಹಣ ಪಡೆದ ಹಗರಣ ಬಯಲಿಗೆಳೆದ ಇಬ್ಬರು ಪತ್ರಕರ್ತರ ವಿರುದ್ಧ ಕ್ರಿಮಿನಲ್ ವಿಚಾರಣೆ ನಡೆಸಲು ಅನುಮತಿ ನೀಡಬೇಕೆಂದು ಕೋರಿ ದೆಹಲಿ ಸರ್ಕಾರ ಸಲ್ಲಿಸಿದ್ದ ಮನವಿಯನ್ನು ಸುಪ್ರೀಂಕೋರ್ಟ್ ಸೋಮವಾರ ತಳ್ಳಿ ಹಾಕಿದೆ.ಹೈಕೋರ್ಟ್ ಆದೇಶ ಪ್ರಶ್ನಿಸಿ ದೆಹಲಿ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿಯನ್ನು ನ್ಯಾಯಮೂರ್ತಿಗಳಾದ ಆಫ್ತಾಬ್ ಆಲಂ ಮತ್ತು ರಂಜನಾ ಪ್ರಕಾಶ್ ದೇಸಾಯಿ ಅವರನ್ನು ಒಳಗೊಂಡ ಪೀಠವು ವಜಾಗೊಳಿಸಿದೆ.

ಅನಿರುದ್ಧ ಬಹಾಲ್ ಮತ್ತು ಸುಹಾಸಿನಿ ರಾಜ್ ವಿರುದ್ಧ ಕ್ರಿಮಿನಲ್ ವಿಚಾರಣೆ ನಡೆಸುವುದನ್ನು ಕಳೆದ ವರ್ಷ ದೆಹಲಿ ಹೈಕೋರ್ಟ್ ರದ್ದುಗೊಳಿಸಿತ್ತು.ವೆಬ್‌ಸೈಟ್ ಇಟಚ್ಟಿ ಟಠಿ.ಇಟಞ ವರದಿಗಾರರಾದ ಬಹಾಲ್ ಮತ್ತು ರಾಜ್ ಅವರು ಮಾರುವೇಷ ಕಾರ್ಯಾಚರಣೆ ನಡೆಸಿ 2005ರಲ್ಲಿ ಸಂಸತ್ತಿನಲ್ಲಿ  ವಿವಿಧ ಪಕ್ಷಗಳ 11 ಸಂಸದರು ಪ್ರಶ್ನೆ ಕೇಳಲು ಲಂಚ ಪಡೆದಿದ್ದನ್ನು ಕ್ಯಾಮೆರಾದಲ್ಲಿ ಸೆರೆ ಹಿಡಿದಿದ್ದರು.ಈ ಕಾರ್ಯಾಚರಣೆಯನ್ನು ಹೈಕೋರ್ಟ್ 2010ರ ಸೆ. 24ರಂದು ಎತ್ತಿ ಹಿಡಿದು ಭ್ರಷ್ಟಾಚಾರ ಬಯಲಿಗೆಳೆಯಲು ಇದು ಒಂದು ಮಾರ್ಗ ಎಂದು ಹೇಳಿತ್ತು.ಇಬ್ಬರು ವರದಿಗಾರರ ವಿರುದ್ಧ ದೆಹಲಿ ಪೊಲೀಸರು ಎಫ್‌ಐಆರ್ ದಾಖಲಿಸಿದ್ದರು.

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry