ಬುಧವಾರ, ಜೂನ್ 23, 2021
22 °C

ಪತ್ರಕರ್ತ ಇ.ರಾಘವನ್ ನಿಧನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೆಂಗಳೂರು: `ವಿಜಯ ಕರ್ನಾಟಕ~ ಮತ್ತು `ವಿಜಯ ನೆಕ್ಸ್ಟ್~ನ ಸಂಪಾದಕ ಇ. ರಾಘವನ್ (6) ಶನಿವಾರ ನಗರದಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ.ಹೃದಯಾಘಾತಕ್ಕೆ ಒಳಗಾಗಿದ್ದ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಎಂ.ಎಸ್. ರಾಮಯ್ಯ ಆಸ್ಪತ್ರೆಗೆ ಸೇರಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಸಂಜೆ ಕೊನೆಯುಸಿರೆಳೆದಿದ್ದಾರೆ.ಮೃತರು ತಾಯಿ, ಪ್ರೊಫೆಸರ್ ಆಗಿರುವ ಪತ್ನಿ ಕುಮುದವಲ್ಲಿ ಹಾಗೂ ಪುತ್ರಿ ಸ್ವಾತಿಯನ್ನು ಅಗಲಿದ್ದಾರೆ. ವೃತ್ತಿಯಲ್ಲಿ ಎಂಜಿನಿಯರ್ ಆಗಿರುವ ಪುತ್ರಿ ಇಂಗ್ಲೆಂಡ್‌ನಲ್ಲಿ ನೆಲೆಸಿದ್ದಾರೆ. 1951ರ ಜನವರಿ 18ರಂದು ಬೆಂಗಳೂರಿನಲ್ಲಿ ಜನಿಸಿದ ರಾಘವನ್ ಅವರು, ಸರ್ಕಾರಿ ಕಲಾ ಕಾಲೇಜಿನಲ್ಲಿ ಬಿ.ಎ. ಪದವಿ ಪಡೆದರು.1971ರಲ್ಲಿ `ಇಂಡಿಯನ್ ಎಕ್ಸ್‌ಪ್ರೆಸ್~ ಮೂಲಕ ಪತ್ರಿಕೋದ್ಯಮ ಕ್ಷೇತ್ರಕ್ಕೆ ಪದಾರ್ಪಣೆ ಮಾಡಿದ ಅವರು, ನಂತರ `ಟೈಮ್ಸ ಆಫ್ ಇಂಡಿಯಾ~ ಪತ್ರಿಕೆಯಲ್ಲಿ ಮುಖ್ಯ ವರದಿಗಾರರಾಗಿ ಕೆಲಸ ನಿರ್ವಹಿಸಿದ್ದರು. ಆನಂತರ `ಎಕನಾಮಿಕ್ ಟೈಮ್ಸ~ನ ಬೆಂಗಳೂರು ಆವೃತ್ತಿಯ ಸಂಪಾದಕರಾಗಿಯೂ ಸೇವೆ ಸಲ್ಲಿಸಿದ್ದರು.ಸೇವೆಯಿಂದ ನಿವೃತ್ತರಾದ ನಂತರ ಅವರು, ಕಳೆದ ಒಂದೂವರೆ ವರ್ಷದಿಂದ `ವಿಜಯ ಕರ್ನಾಟಕ~ ಹಾಗೂ `ವಿಜಯ ನೆಕ್ಸ್ಟ್~ ಸಂಪಾದಕರಾಗಿ ಕೆಲಸ ನಿರ್ವಹಿಸುತ್ತಿದ್ದರು.ಪ್ರಸ್ತುತ ಅವರ ಮೃತದೇಹವನ್ನು ಎಂ.ಎಸ್.ರಾಮಯ್ಯ ಆಸ್ಪತ್ರೆಯ ಶವಾಗಾರದಲ್ಲಿಡಲಾಗಿದೆ.

 

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.