ಪದತ್ಯಾಗ ಇಲ್ಲ

7

ಪದತ್ಯಾಗ ಇಲ್ಲ

Published:
Updated:

ನವದೆಹಲಿ: ಭ್ರಷ್ಟಾಚಾರ ಆರೋಪದ ಹಿನ್ನೆಲೆಯಲ್ಲಿ ಮೊಕದ್ದಮೆ ಹೂಡಲು ‘ಜಸ್ಟೀಸ್ ಲಾಯರ್ಸ್ ಪೋರಂ’ಗೆ ರಾಜ್ಯಪಾಲರು ಅನುಮತಿ ನೀಡಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ರಾಜೀನಾಮೆ ನೀಡುವ ಅಗತ್ಯ ಇಲ್ಲ ಎಂದು ಬಿಜೆಪಿ ಉನ್ನತ ಮೂಲಗಳು ತಿಳಿಸಿವೆ.ಉತ್ತರ ಪ್ರದೇಶದ ಮುಖ್ಯಮಂತ್ರಿ ಮಾಯಾವತಿ ಮತ್ತು ಹಿಂದಿನ ಮುಖ್ಯಮಂತ್ರಿ ಮುಲಾಯಂ ಸಿಂಗ್ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಕೆಯಾದರೂ ಅವರು ರಾಜೀನಾಮೆ ಕೊಟ್ಟಿರಲಿಲ್ಲ ಎಂದು ಮೂಲಗಳು ಸ್ಪಷ್ಟಪಡಿಸಿವೆ.ಈ ಮಧ್ಯೆ, ಶನಿವಾರ ಯಡಿಯೂರಪ್ಪ ಕರೆದಿದ್ದ ಸಚಿವ ಸಂಪುಟ ಸಭೆಯನ್ನು ರದ್ದು ಮಾಡಿದ್ದು, ಬಿಜೆಪಿ ಹಿರಿಯ ಮುಖಂಡರ ಸಲಹೆ ಮೇರೆಗೆ ಈ ತೀರ್ಮಾನ ಕೈಗೊಂಡಿದ್ದಾರೆ.‘ರಾಜ್ಯಪಾಲರನ್ನು ವಪಸ್ ಕರೆಸಬೇಕು’ ಎಂಬ ನಿರ್ಣಯ ಕೈಗೊಳ್ಳಲು ಸಂಪುಟ ಸಭೆ ಕರೆಯಲಾಗಿತ್ತು.‘ಇಂಥ ನಿರ್ಣಯ ಕೈಗೊಳ್ಳುವ ಅತಿರೇಕಕ್ಕೆ ಹೋಗುವುದು ಬೇಡ ಸಂಯಮ ವಹಿಸಿ’ ಎಂದು ಪಕ್ಷದ ನಾಯಕರು ಮುಖ್ಯಮಂತ್ರಿಗೆ ಕಿವಿ ಮಾತು ಹೇಳಿದ್ದಾರೆ.

 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry