ಶುಕ್ರವಾರ, ಮೇ 7, 2021
27 °C

ಪದವಿ ಜೊತೆಗೆ ಕೌಶಲ ಅಗತ್ಯ: ಪ್ರೊ.ಎಸ್.ಎನ್.ಹೆಗ್ಡೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಮೈಸೂರು: `ಪದವಿ ಜೊತೆಗೆ ಉದ್ಯೋಗಕ್ಕೆ ಅಗತ್ಯವಾದ ವಿವಿಧ ಕೌಶಲಗಳನ್ನು ಹೊಂದುವತ್ತ ವಿದ್ಯಾರ್ಥಿಗಳು ಗಮನ ಹರಿಸಬೇಕು. ಆಗ ಮಾತ್ರ ಕೈತುಂಬ ಕೆಲಸ ಸಿಗುತ್ತದೆ~ ಎಂದು ಮೈಸೂರು ವಿಶ್ವ ವಿದ್ಯಾನಿಲಯದ ವಿಶ್ರಾಂತ ಕುಲಪತಿ ಡಾ.ಎಸ್.ಎನ್.ಹೆಗ್ಡೆ ಸೋಮವಾರ ತಿಳಿಸಿದರು.ಮಾನಸಗಂಗೋತ್ರಿಯಲ್ಲಿರುವ ಸೆನೆಟ್ ಭವನದಲ್ಲಿ ಏರ್ಪಡಿಸಿದ್ದ ಮೈಸೂರು ವಿಶ್ವವಿದ್ಯಾನಿಲಯದ ನೂತನ ವಿದ್ಯಾರ್ಥಿಗಳಿಗೆ ಸ್ವಾಗತ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.`ವಿದ್ಯಾರ್ಥಿಗಳು ಹೆಚ್ಚು ಅಂಕಗಳನ್ನು ಗಳಿಸುವತ್ತ ಗಮನ ಹರಿಸುತ್ತಾರೆ. ಆದರೆ ಉದ್ಯೋಗಕ್ಕೆ ಅಗತ್ಯವಾದ ಕುಶಲತೆ, ಸಂವಹನ ಮತ್ತು ಇಂಗ್ಲಿಷ್ ಭಾಷೆಯನ್ನು ಕಲಿಯುವುದಿಲ್ಲ. ಹೀಗಾಗಿ ಉದ್ಯೋಗವಿಲ್ಲ ಎಂದು ಹತಾಶ ರಾಗುತ್ತಾರೆ. ಇದು ತಪ್ಪು ಭಾವನೆ. ಸ್ಪರ್ಧಾತ್ಮಕ ಯುಗದಲ್ಲಿ ಬೇಕಾದಷ್ಟು ಉದ್ಯೋಗಾವಕಾಶಗಳಿವೆ. ಅವುಗಳನ್ನು ಪಡೆದುಕೊಳ್ಳಲು ಅಗತ್ಯವಾದ ಕೌಶಲವನ್ನು ಹೊಂದುವತ್ತ ವಿದ್ಯಾರ್ಥಿಗಳು ಆಸಕ್ತಿ ವಹಿಸಬೇಕು~ ಎಂದು ಹೇಳಿದರು.ಹಂಪಿ ಕನ್ನಡ ವಿಶ್ವವಿದ್ಯಾನಿಲಯದ ವಿಶ್ರಾಂತ ಕುಲಪತಿ ಪ್ರೊ.ಎಚ್.ಜೆ.ಲಕ್ಕಪ್ಪಗೌಡ ಮಾತನಾಡಿ, `ವಿದ್ಯಾರ್ಥಿಗಳು ಹಣ, ಅಧಿಕಾರ, ಭೋಗ ಜೀವನದ ಹಿಂದೆ ಬಿದ್ದಿದ್ದಾರೆ. ಆದರೆ ಉತ್ತಮ ಮನುಷ್ಯ ನಾಗುವುದನ್ನೇ ಮರೆತ್ತಿದ್ದಾರೆ. ಏನಾದರೂ ಆಗು ಮೊದಲು ಮಾನವ ನಾಗು ಎನ್ನುವ ಕವಿವಾಣಿಯನ್ನು ಎಲ್ಲರೂ ನೆನಪಿಸಿಕೊಳ್ಳಬೇಕು~ ಎಂದು ಹೇಳಿದರು.ಕುಲಪತಿ ಪ್ರೊ.ವಿ.ಜಿ.ತಳವಾರ್ ಅಧ್ಯಕ್ಷತೆ ವಹಿಸಿದ್ದರು. ಕುಲಸಚಿವ ಪ್ರೊ.ಪಿ.ಎಸ್.ನಾಯಕ್ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರೊ. ಪಿ.ಈಶ್ವರ್‌ಭಟ್ ಅತಿಥಿಗಳನ್ನು ಪರಿಚಯಿಸಿದರು. ಡಾ.ನಿರಂಜನ ವಾನಳ್ಳಿ ಕಾರ್ಯಕ್ರಮವನ್ನು ನಿರೂಪಿಸಿದರು.ಸಮಾರಂಭದಲ್ಲಿ ನೂರಾರು ವಿದ್ಯಾರ್ಥಿಗಳು, ವಿವಿಧ ವಿಭಾಗಗಳ ಮುಖ್ಯಸ್ಥರು, ಪ್ರಾಧ್ಯಾಪಕರು, ಉಪನ್ಯಾಸಕರು ಹಾಜರಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.