ಗುರುವಾರ , ಜನವರಿ 30, 2020
20 °C

ಪದೋನ್ನತಿ ಆದೇಶ ಜಾರಿಗೆ ಒತ್ತಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿಕ್ಕಬಳ್ಳಾಪುರ: ನಗರದ ಜಿಲ್ಲಾ ಪಂಚಾಯಿತಿ ಕಚೇರಿ ಎದುರು ಗುರುವಾರ ಬಿಲ್‌ ಕಲೆಕ್ಟರ್‌­ಗಳು ಪದೋನ್ನತಿಗೆ ಆಗ್ರಹಿಸಿ ಪ್ರತಿಭಟನೆ ನಡೆಸಿದರು.ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಗ್ರಾಮ ಪಂಚಾಯಿತಿ ನೌಕರರ ಸಂಘದ ಗೌರವಾಧ್ಯಕ್ಷ ಸಿದ್ದಗಂಗಪ್ಪ, ಬಿಲ್‌ ಕಲೆಕ್ಟರುಗಳ ಪದೋನ್ನತಿ ಬಗ್ಗೆ ಸರ್ಕಾರ ನೀಡಿರುವ ಆದೇಶ ಜಿಲ್ಲೆಯಲ್ಲಿ ಶೀಘ್ರ ಜಾರಿಯಾಗಬೇಕಿದೆ ಎಂದರು.ಪದೋನ್ನತಿ ಆದೇಶ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಕಾರ್ಯಗತವಾಗಿದೆ. ಆದರೆ ಜಿಲ್ಲೆ­ಯಲ್ಲಿ ಈ ಕುರಿತು ಅಧಿ­ಕಾರಿ­ಗಳು ನಿರ್ಲಕ್ಷ್ಯ ಧೋರಣೆ ಹೊಂದಿ­ದ್ದಾರೆ ಎಂದು ಆರೋಪಿಸಿದರು.ಇತರ ಜಿಲ್ಲೆಗಳಲ್ಲಿ ಸರ್ಕಾರದ ಆದೇಶದಂತೆ 10 ವರ್ಷ ಅನುಭವ­ವಿರುವ ಬಿಲ್‌ ಕಲೆಕ್ಟರುಗಳಿಗೆ ಗ್ರೇಡ್‌ 2 ಕಾರ್ಯದರ್ಶಿ ಹುದ್ದೆಗೆ ಪದೋನ್ನತಿ ನೀಡಲಾಗಿದೆ. ಆದರೆ ಇಲ್ಲಿ ಮಾತ್ರ ಜಿಲ್ಲಾ ಪಂಚಾಯಿತಿ ಅಧಿಕಾರಿಗಳು ಕ್ರಮ ಜರುಗಿಸಿಲ್ಲ ಎಂದರು.ಜಿಲ್ಲೆಯಲ್ಲಿ 15 ಗ್ರೇಡ್‌ 2 ಕಾರ್ಯದರ್ಶಿ ಹುದ್ದೆಗಳು ಖಾಲಿ­ಯಿವೆ. ಆದರೆ ಯಾರಿಗೂ ಅವಕಾಶ ನೀಡುತ್ತಿಲ್ಲ. ಪದೋನ್ನತಿ ಪಟ್ಟಿಯನ್ನೂ ಪ್ರಕಟಿಸುತ್ತಿಲ್ಲ ಎಂದು ದೂರಿದರು.

ಪ್ರತಿಕ್ರಿಯಿಸಿ (+)