ಸೋಮವಾರ, ಜೂನ್ 21, 2021
21 °C

ಪರಿವರ್ತನೆಗೆ ಜಾಗೃತಿ ಅಗತ್ಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಿಕ್ಕಬಳ್ಳಾಪುರ:  ಭ್ರೂಣ ಲಿಂಗ ಪರೀಕ್ಷಿಸುವ ಮತ್ತು ಹತ್ಯೆ ಮಾಡುವ ಪ್ರಕರಣಗಳು ಸಾಮಾಜಿಕ ಪಿಡುಗಾಗಿ ಪರಿಣಮಿ ಸಿದ್ದು, ಇದಕ್ಕೆ ಪೂರ್ಣಪ್ರಮಾಣದಲ್ಲಿ ಕಡಿವಾಣ ಹಾಕ ಬೇಕಿದೆ. ಜನರಲ್ಲಿ ಜಾಗೃತಿ ಮೂಡಿಸುವ ಮೂಲಕ ಸಾಮಾಜಿಕ ಬದ ಲಾವಣೆ ತರಬೇಕಿದೆ ಎಂದು ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ರಾಮಚಂದ್ರರೆಡ್ಡಿ ತಿಳಿಸಿದರು.ಭ್ರೂಣ ಲಿಂಗ ಪತ್ತೆ ಕುರಿತು ತಾಲ್ಲೂಕು ಪಂಚಾಯಿತಿ ಸಭಾಂ ಗಣದಲ್ಲಿ ಗ್ರಾಮಪಂಚಾಯಿತಿ ಅಧ್ಯಕ್ಷರು ಮತ್ತು ಸದಸ್ಯರಿಗೆ ಮಂಗಳವಾರ ನಡೆದ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿ, `ಜನರಲ್ಲಿ ಜಾಗೃತಿ ಮೂಡಿಸಿದ್ದಲ್ಲಿ ಮಾತ್ರ ಸಾಮಾಜಿಕ ಬದಲಾವಣೆಗಳನ್ನು ತರಲು ಸಾಧ್ಯ~ ಎಂದರು.ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಮಿತ್ರಣ್ಣ ಮಾತನಾಡಿ, `ಭ್ರೂಣ ಪರೀಕ್ಷೆ ಮತ್ತು ಹತ್ಯೆ ಮಾಡದಂತೆ ನಗರ, ಪಟ್ಟಣ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಜಾಗೃತಿ ಮೂಡಿಸ ಲಾಗುತ್ತಿದೆ. ಭ್ರೂಣ ಲಿಂಗ ಪತ್ತೆ ಅಥವಾ ಹತ್ಯೆ ಮಾಡಿದ್ದಲ್ಲಿ, ಕಠಿಣ ಶಿಕ್ಷೆಗೆ ಗುರಿಯಾಗಬೇಕಾಗುತ್ತದೆ ಎಂಬ ಎಚ್ಚರಿಕೆಯನ್ನೂ ಸಹ ನೀಡುತ್ತಿದ್ದೇವೆ.ಗ್ರಾಮ, ತಾಲ್ಲೂಕು ಮತ್ತು ಜಿಲ್ಲಾ ಪಂಚಾ ಯಿತಿ ಸದಸ್ಯರಿಗೆ, ವಿವಿಧ ಸಂಘ ಸಂಸ್ಥೆಗಳ ಪ್ರತಿನಿಧಿಗಳಿಗೆ ಮತ್ತು ಸಾರ್ವಜನಿಕರಿಗೆ ಅರಿವು ಮೂಡಿಸಲಾಗುತ್ತಿದೆ~ ಎಂದರು.ಭ್ರೂಣಹತ್ಯೆ ಕುರಿತು ಸಾಕ್ಷ್ಯಚಿತ್ರವನ್ನು ಪ್ರದರ್ಶಿಸಲಾಯಿತು. ಆರೋಗ್ಯಾಧಿಕಾರಿ ಡಾ. ಮೋಹನ್‌ಬಾಬು ಅವರು ಉಪನ್ಯಾಸ ನೀಡಿದರು. ವಕೀಲ ನಾರಾಯಣಮೂರ್ತಿ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ವಿಜಯಕುಮಾರ್, ತಾಲ್ಲೂಕು ಆರೋಗ್ಯ ಶಿಕ್ಷಣಾಧಿಕಾರಿ ಹರೀಶ್, ವಾರ್ತಾ ಇಲಾಖೆ ಸಹಾಯಕ ನಿರ್ದೇಶಕಿ ಕೆ.ಎನ್.ಕವನಾ ಮತ್ತಿತರರು ಉಪಸ್ಥಿತರಿದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.