ಸೋಮವಾರ, ನವೆಂಬರ್ 18, 2019
22 °C

`ಪರಿಶಿಷ್ಟರ ಅಭಿವೃದ್ಧಿ- ಆತ್ಮಾವಲೋಕನ ಅಗತ್ಯ'

Published:
Updated:
`ಪರಿಶಿಷ್ಟರ ಅಭಿವೃದ್ಧಿ- ಆತ್ಮಾವಲೋಕನ ಅಗತ್ಯ'

ಉಡುಪಿ: `ಸರ್ಕಾರದ ಕೋಟ್ಯಂತರ ರೂಪಾಯಿ ಹಣವನ್ನು ಯೋಜನೆಗಳಲ್ಲಿ ವಿನಿಯೋಗಿಸುತ್ತಿದ್ದರೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕವಾಗಿ ಏಕೆ ಬೆಳವಣಿಗೆಯಾಗುತ್ತಿಲ್ಲ ಎಂದು ಎಲ್ಲರೂ ಆತ್ಮವಾಲೋಕನ ಮಾಡಿಕೊಳ್ಳಬೇಕಿದೆ' ಎಂದು ಉಡುಪಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಸ್.ಎ. ಪ್ರಭಾಕರ ಶರ್ಮ ಹೇಳಿದರು.ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ನಗರಸಭೆ, ಸಮಾಜ ಕಲ್ಯಾಣ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ನಡೆದ ಬಾಬು ಜಗಜೀವನರಾಂ ಅವರ  106ನೇ ಜನ್ಮ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.`ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡದ ಸುಮಾರು 25 ಸಾವಿರ ಕುಟುಂಬಗಳಿವೆ. ಅವರ ಸಂಖ್ಯೆ 1.10 ಲಕ್ಷ ಇರಬಹುದು. ಆದರೆ ಇಷ್ಟು ಕಡಿಮೆ ಪ್ರಮಾಣದ ಜನರನ್ನು ನಾವು ಮುಖ್ಯ ವಾಹಿನಿಗೆ ತರಲು ಸಾಧ್ಯವಾಗಿಲ್ಲ. ಸರ್ಕಾರದ ವಿವಿಧ ಯೋಜನೆಗಳನ್ನು ಅವರಿಗೆ ತಲುಪಿಸುತ್ತಿದ್ದೇವೆ. ಆದರೂ ಅವರು ಸಾಮಾಜಿಕವಾಗಿ ಅವರು ಸದೃಢರಾಗಿಲ್ಲ. ಬಡತನ ರೇಖೆಗಿಂತ ಕೆಳಗೆ ಅವರು ಬದುಕುವಂತಾಗಿದೆ' ಎಂದರು. `ಸಾಮಾಜಿಕ ಸಮೀಕ್ಷೆ ನಡೆದರೆ ಸತ್ಯ ಗೊತ್ತಾಗಲಿದೆ. ಆದ್ದರಿಂದ ಯಾವ ರೀತಿಯಲ್ಲಿ ಕೆಲಸ ಮಾಡಿದರೆ ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕವಾಗಿ ಈ ಸಮುದಾಯಗಳನ್ನು ಮೇಲಕ್ಕೆತ್ತಲು ಸಾಧ್ಯ ಎಂಬುದನ್ನು ಎಲ್ಲ ಅಧಿಕಾರಿಗಳು ಯೋಚಿಸಬೇಕು' ಎಂದರು.ಪ್ರಾಸ್ತಾವಿಕವಾಗಿ ಮಾತನಾಡಿದ ಜಿಲ್ಲಾ ಸಮಾಜ ಕಲ್ಯಾಣ ಅಧಿಕಾರಿ ಡಾ. ಪ್ರಭುಲಿಂಗು ಹಸಿರು ಕ್ರಾಂತಿಗೆ ಜಗಜೀವನರಾಂ ಚಾಲನೆ ನೀಡಿದರು' ಎಂದರು.ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಡಿ. ಪ್ರಾಣೇಶ್ ರಾವ್, ಮುಖ್ಯ ಯೋಜನಾಧಿಕಾರಿ ವಿಜಯ್‌ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು.

ಪ್ರತಿಕ್ರಿಯಿಸಿ (+)