ಶನಿವಾರ, ಡಿಸೆಂಬರ್ 7, 2019
21 °C

ಪರಿಶಿಷ್ಟರ ಕಲ್ಯಾಣಕ್ಕೆ ನಿಗಾ ಸಮಿತಿ: ಒತ್ತಾಯ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಪರಿಶಿಷ್ಟರ ಕಲ್ಯಾಣಕ್ಕೆ ನಿಗಾ ಸಮಿತಿ: ಒತ್ತಾಯ

ಯಲಹಂಕ: ‘ರೈಲು ಪ್ರಯಾಣಿಕರ ಸವಲತ್ತುಗಳಿಗೆ ಯಾವುದೇ ರೀತಿಯ ಕೊರತೆಯಾಗದಂತೆ ಲಭ್ಯವಿರುವ ಎಲ್ಲ ಸೌಕರ್ಯಗಳನ್ನು ಒದಗಿಸಲು ಪ್ರಾಮಾ ಣಿಕ ಪ್ರಯತ್ನ ಮಾಡಲಾಗು ವುದು’ ಎಂದು ರಾಷ್ಟ್ರೀಯ ರೈಲ್ವೆ ಪ್ರಯಾಣಿಕರ ಸವಲತ್ತುಗಳ ಸಮಿತಿ ಅಧ್ಯಕ್ಷ ಚಲವಾದಿ ನಾರಾಯಣಸ್ವಾಮಿ ಹೇಳಿದರು.ಬೆಂಗಳೂರು ನಗರ ಜಿಲ್ಲಾ ಕಾಂಗ್ರೆಸ್‌  ಪರಿಶಿಷ್ಟ ಜಾತಿ ವಿಭಾಗದ ವತಿಯಿಂದ ಸಹಕಾರ ನಗರದಲ್ಲಿ ಈಚೆಗೆ ಆಯೋಜಿ ಸಿದ್ದ ಪದಾಧಿಕಾರಿಗಳ ಸಭೆಯಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು.ಕರ್ನಾಟಕ ಪ್ರದೇಶ ಕಾಂಗ್ರೆಸ್‌ ಪರಿಶಿಷ್ಟಜಾತಿ ವಿಭಾಗದ ಅಧ್ಯಕ್ಷ ಎನ್‌. ಮಂಜುನಾಥ್‌ ಮಾತನಾಡಿ, ‘ಪರಿಶಿಷ್ಟ ಜಾತಿ ಮತ್ತು ಪಂಗಡದವರ ಕಲ್ಯಾಣ ಕಾರ್ಯಕ್ರಮಗಳನ್ನು  ಪರಿಣಾಮಕಾರಿ ಯಾಗಿ ಅನುಷ್ಠಾನ ಮಾಡಲು ನಿಗಾ ಸಮಿತಿ ರಚಿಸಬೇಕು ಎಂದು ಮುಖ್ಯ ಮಂತ್ರಿ ಅವರಿಗೆ ಮನವಿ ಸಲ್ಲಿಸಲಾಗಿದೆ’ ಎಂದರು. ವಿಧಾನ ಪರಿಷತ್‌ ಮಾಜಿ ಸದಸ್ಯೆ ಜಲಜಾನಾಯಕ್‌ ಹಾಜರಿದ್ದರು.

ಪ್ರತಿಕ್ರಿಯಿಸಿ (+)