ಬುಧವಾರ, ಜೂನ್ 16, 2021
28 °C

ಪರಿಶಿಷ್ಟರ ಕಾಲೊನಿ ಅಭಿವೃದ್ಧಿಗೆ ವಿಶೇಷ ಅನುದಾನ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

 ಮುಧೋಳ : ಮುಧೋಳ ಮೀಸಲು ಕ್ಷೇತ್ರದ ಗ್ರಾಮೀಣ ಪರಿಶಿಷ್ಟ ಜಾತಿ, ಪಂಗಡದ ಕಾಲೊನಿಗಳ ಅಭಿವೃದ್ಧಿಗೆ ಸರ್ಕಾರ ರೂ 12 ಕೋಟಿ  ವಿಶೇಷ ವಿಶೇಷ ಅನುದಾನ ಬಿಡುಗಡೆ ಮಾಡಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಹೇಳಿದರು.ತಾಲ್ಲೂಕಿನ ಕಸಬಾಜಂಬಗಿಯಲ್ಲಿ ಪರಿಶಿಷ್ಟ ಜಾತಿಯ ಕಾಲೊನಿಯ ವಿಶೇಷ ಘಟಕ ಯೋಜನೆಗಳಿಗೆ ಚಾಲನೆ ನೀಡಿ ಅವರು ಮಾತನಾಡಿದರು.   ಕಸಬಾ ಜಂಬಗಿ ಗ್ರಾಮದಲ್ಲಿ ಹಿಂದುಳಿದ ವರ್ಗದವರ ಕಾಲೊನಿಯ ಸಮಗ್ರ ಅಭಿವೃದ್ಧಿಗಾಗಿ ರೂ.  30 ಲಕ್ಷ ಬಿಡುಗಡೆಗೊಳಿಸಿದ್ದು, ಅದರಲ್ಲಿ ಬೇರೆ ಬೇರೆ ಭಾಗಗಳಲ್ಲಿ ಟೆಂಡರ್ ಕರೆಯಲಾಗುತ್ತಿದೆ ಎಂದು ಹೇಳಿದರು.ಕಸಬಾಜಂಬಗಿಯಲ್ಲಿ ಸಾಂಸ್ಕೃತಿಕ ಭವನ ಕಾಮಗಾರಿಗೆ ರೂ. 10 ಲಕ್ಷ, ಗ್ರಾಮದ ರಸ್ತೆ ನಿರ್ಮಾಣಕ್ಕೆ ರೂ15 ಲಕ್ಷ ಹಾಗೂ ಗ್ರಾಮದಿಂದ ಹೆದ್ದಾರಿಯ ಕ್ರಾಸ್‌ದವರಿಗೆ ಡಾಂಬರೀಕರಣ ಮಾಡಲಾಗುವುದು ಎಂದು ತಿಳಿಸಿದರು. ರನ್ನ ಸಹಕಾರಿ ಸಕ್ಕರೆ ಕಾರ್ಖಾನೆ ಅಧ್ಯಕ್ಷ ರಾಮಣ್ಣ ತಳೇವಾಡ,  ಬಿಜೆಪಿ ತಾಲ್ಲೂಕು ಘಟಕದ  ಅಧ್ಯಕ್ಷ ಬಿ.ಎಚ್. ಪಂಚಗಾಂವಿ, ನಿಂಗಣ್ಣ ಅಂತಾಪುರ, ರಾಮಣ್ಣ ಮಾಳಿ, ಪ್ರಕಾಶ ಸಣ್ಣತಮ್ಮಪ್ಪಗೋಳ, ಸೋಮವ್ವ  ಗಲಗಲಿ, ಅಪ್ಪಾರಾವ ನಲವಡೆ, ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ಡಾ.ವಿ.ಕೆ. ದೇಶಪಾಂಡೆ, ಬಸವರಾಜ ನಾಡಗೌಡ, ಹನಮರಡ್ಡಿ  ಉಪಸ್ಥಿತರಿದ್ದರು.ಕ್ರಿಮಿನಲ್ ಪ್ರಕರಣ ದಾಖಲಿಸಲು ಆಗ್ರಹ

ಮುಧೋಳ: ಪರಿಶಿಷ್ಟ ಪಂಗಡದ ನಕಲಿ ಜಾತಿ ಪ್ರಮಾಣ ಪತ್ರ ನೀಡಿ ಸರ್ಕಾರದ ಯೋಜನೆಯನ್ನು ದುರುಪಯೋಗ ಪಡೆಸಿಕೊಂಡಿರುವ ತಾಲ್ಲೂಕಿನ ಹೆಬ್ಬಾಳದ ಫಲಾನುಭವಿಗಳ  ವಿರುದ್ಧ  ಕ್ರಿಮಿನಲ್ ಪ್ರಕರಣ ದಾಖಲಿಸಬೇಕು ಎಂದು ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಸಮಾಜದ ತಾಲ್ಲೂಕು ಘಟಕವು  ಜಿಲ್ಲಾಧಿಕಾರಿಗಳನ್ನು ಒತ್ತಾಯಿಸಿದೆ.ಪರಿಶಿಷ್ಟ ಪಂಗಡಕ್ಕೆ ಸೇರಿದ ಬೇಡ, ಬೇಡರು, ವಾಲ್ಮೀಕಿ, ನಾಯಕ, ನಾಯ್ಕ ಈ ಉಪಜಾತಿಗೆ ಸೇರಿದ ಜನಾಂಗ ಸಾಕಷ್ಟು ಸಂಖ್ಯೆಯಲ್ಲಿದ್ದರೂ, ತಹಶೀಲ್ದಾರ, ಕಂದಾಯ ನಿರೀಕ್ಷಕರು ಹಾಗೂ ಗ್ರಾಮ ಲೆಕ್ಕಾಧಿಕಾರಿಗಳು ಸೇರಿಕೊಂಡು ಪರಿಶಿಷ್ಟ ಪಂಗಡಕ್ಕೆ ಸಂಬಂಧವಿಲ್ಲದ ಅಂಬಿಗೇರ, ಬಾರಕೇರ,  ತಳವಾರ, ಕಬ್ಬಲಗೆರ ಈ ಜಾತಿಯವರಿಗೆ ಪರಿಶಿಷ್ಟ ಪಂಗಡದ ಜಾತಿ ಪ್ರಮಾಣ ಪತ್ರ ನೀಡಿರುವುದು ತಮ್ಮ ಸಮಾಜಕ್ಕೆ ನೋವುಂಟು ಮಾಡಿದೆ ಎಂದು ಹೇಳಿದೆತಹಶೀಲ್ದಾರರು ಸರ್ಕಾರ ಸೂಚಿಸಿದ ಕಡ್ಡಾಯ ನಿಬಂಧನೆಗಳನ್ನು ಅನುಸರಿಸದೇ  ಜಾತಿ ಪ್ರಮಾಣ ಪತ್ರ ನೀಡಿದ್ದಾರೆ. ಈ ಯೋಜನೆ ಫಲಾನುಭವಿಗಳಾದ ಕೆಲವರಿಗೆ ನಕಲಿ ಜಾತಿ ಪ್ರಮಾಣ ಪತ್ರ ನೀಡಿರುವುದು ನೋವುಂಟು ಮಾಡಿದೆ. ಪಡೆದ ಫಲಾನುಭವಿಗಳು ಸರ್ಕಾರದ ಜಾರಿಗೆ ತಂದಿರುವ ತೋಟಗಾರಿಕೆ ಇಲಾಖೆಯಲ್ಲಿ ಸುವರ್ಣ ಭೂಮಿ ಯೋಜನೆಯಲ್ಲಿ ಆಯ್ಕೆಯಾಗಿ ಹಣ ಪಡೆದಿರುತ್ತಾರೆ ಎಂದು ಆರೋಪಿಸಿದ್ದಾರೆ.ನಕಲಿ ಜಾತಿ ಪ್ರಮಾಣ ಪತ್ರ ನೀಡಿದವರು ಹಾಗೂ ಪಡೆದವರ ಮೇಲೆ ಪ್ರಕರಣ ದಾಖಲಿಸಬೇಕು ಎಂದು ಸಂಘದ ಅಧ್ಯಕ್ಷ ಭೀಮಸಿ ತಳವಾರ, ಗೌರವ ಅಧ್ಯಕ್ಷ ಚನ್ನಬಸಪ್ಪ ಮುತ್ತೂರ, ಅಡಿವೆಪ್ಪ ತಳವಾರ, ಪ್ರಧಾನ ಕಾರ್ಯದರ್ಶಿ ಲಕ್ಷ್ಮಣ ಮಾಲಗಿ ಆಗ್ರಹಿಸಿದ್ದಾರೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.