ಶುಕ್ರವಾರ, ಜುಲೈ 30, 2021
28 °C

`ಪರಿಶ್ರಮದಿಂದ ಯಶಸ್ಸು ಸಾಧ್ಯ'

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಗೋಕಾಕ: ವಿದ್ಯಾರ್ಥಿಗಳು ಕಠಿಣ ಪರಿಶ್ರಮದ ಮೂಲಕ ಅಭ್ಯಸಿಸಿದಾಗ ಮಾತ್ರ ಯಶಸ್ಸು ಕಾಣಲು ಸಾಧ್ಯ ಎಂದು ಅರಣ್ಯ ಉಪ- ಸಂರಕ್ಷಣಾ ಧಿಕಾರಿ ಟಿ. ಹೀರಾಲಾಲ ಹೇಳಿದರು.ಸೋಮವಾರ ನಗರದ ಕೆ.ಎಲ್.ಇ ಸಂಸ್ಥೆಯ ಸಿ.ಎಸ್.ಅಂಗಡಿ ಪದವಿ ಪೂರ್ವ ಮಹಾವಿದ್ಯಾಲಯದ ಪ್ರಸಕ್ತ ಶೈಕ್ಷಣಿಕ ಸಾಲಿನ ಸಾಂಸ್ಕೃತಿಕ ಹಾಗೂ ಕ್ರೀಡಾ ಚಟುವಟಿಕೆ ಮತ್ತು ಕಳೆದ ಶೈಕ್ಷಣಿಕ ವರ್ಷದಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳ ಸನ್ಮಾನ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.ನಮ್ಮ ದೇಶದ ಸಂಸ್ಕೃತಿಯನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು.  ಶ್ರದ್ಧಾ-ಭಕ್ತಿಯಿಂದ ಅಭ್ಯಾಸ ಮಾಡಿ ರಾಷ್ಟ್ರಮಟ್ಟದ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಭಾಗವಹಿಸಿ ಪ್ರತಿಭಾನ್ವಿತರಾಗಿ ಹೊರಹೊಮ್ಮುವಂತೆ ಹಾರೈಸಿದರು.ಮುಖ್ಯ ಅತಿಥಿಗಳಾಗಿದ್ದ ಸಂಸ್ಥೆಯ ಚೇರಮನ್ ಮಲ್ಲಿಕಾರ್ಜುನ ಚುನಮರಿ ಮಾತನಾಡಿ, ವಿದ್ಯಾರ್ಥಿಗಳು  ಸಾಂಸ್ಕೃತಿಕ ಹಾಗೂ ಕ್ರೀಡಾ ಚಟುವಟಿಕೆಗಳಲ್ಲೂ ಪಾಲ್ಗೊಂಡು ಪರಿಪೂರ್ಣ ವ್ಯಕ್ತಿತ್ವ ರೂಪಿಸಿಕೊಳ್ಳಬೇಕು ಎಂದರು.ವೇದಿಕೆಯಲ್ಲಿ ಅಧ್ಯಕ್ಷತೆ ವಹಿಸಿದ್ದ ಸಂಸ್ಥೆ ನಿರ್ದೇಶಕ ಜಯಾನಂದ ಮುನವಳ್ಳಿ, ಪ್ರಾಚಾರ್ಯ ಜಿ.ಎಂ.ಅಂದಾನಿ, ಉಪನ್ಯಾಸಕಿ ಪ್ರೇಮಾ ಗೌಡರ, ಕೆ.ಎಲ್.ಇ. ಇಂಗ್ಲಿಷ್ ಮಾಧ್ಯಮ ಶಾಲೆಯ ಪ್ರಾಚಾರ್ಯೆ ಅನುಪಾ ಕೌಶಿಕ ಉಪಸ್ಥಿತರಿದ್ದರು. ಉಪನ್ಯಾಸಕ ವಿ.ಎಸ್.ಕೌಲಾಪೂರ ಸ್ವಾಗತಿಸಿದರು. ವಿದ್ಯಾರ್ಥಿನಿ ನಿಖಿತಾ ಕಾರ್ಯಕ್ರಮ ನಿರೂಪಿಸಿದರೆ, ಪೃಥ್ವಿ ವಂದಿಸಿದರು.ಸನ್ಮಾನ

ಸಮೀಪದ ಮಲ್ಲಾಪೂರ ಪಿ.ಜಿ. ಗ್ರಾಮ ಪಂಚಾ ಯಿತಿ ಕಾರ್ಯಾಲಯದಲ್ಲಿ ಈಚೆಗೆ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ರಾಜ್ಯ ಜವಳಿ ಕಾರ್ಮಿಕರ ಸಂಘದ ಉಪಾಧ್ಯಕ್ಷ ಹಾಗೂ ಕಾಂಗ್ರೆಸ್ ಮುಖಂಡ ಅಂಬಿರಾವ್ ಪಾಟೀಲ ಅವರನ್ನು ಸನ್ಮಾನಿಸಲಾಯಿತು.

ಗ್ರಾ.ಪಂ.ಅಧ್ಯಕ್ಷೆ ಕಮಲಾಬಾಯಿ ಪವಾರ್ ಅವರು ಅಂಬಿರಾವ್ ಅವರನ್ನು ಸನ್ಮಾನಿಸಿದರು. ಗ್ರಾ.ಪಂ. ಉಪಾಧ್ಯಕ್ಷ ಮಾರುತಿ ಗಂಡವ್ವಗೋಳ, ತಾ.ಪಂ. ಸದಸ್ಯ ಕೆಂಪಣ್ಣ ನಾಯಿಕ, ಜಿ.ಪಂ. ಮಾಜಿ ಉಪಾಧ್ಯಕ್ಷ ಟಿ.ಆರ್.ಕಾಗಲ್, ಗ್ರಾ.ಪಂ ಮಾಜಿ ಅಧ್ಯಕ್ಷ ಡಿ.ಎಮ್.ದಳವಾಯಿ, ಜಿ.ಪಂ. ಮಾಜಿ ಸದಸ್ಯ ಸುಧೀರ ಜೋಡಟ್ಟಿ, ಗ್ರಾ.ಪಂ. ಸದಸ್ಯರಾದ ಗೌಸ ಖಾನ ಕಿತ್ತೂರ, ಪರಶುರಾಮ ಕಲ ಕುಟಗಿ ಉಪಸ್ಥಿತರಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.