ಪರಿಷತ್ ವಿರೋಧ ಪಕ್ಷದ ನಾಯಕರಾಗಿ ಎಸ್.ಆರ್. ಪಾಟೀಲ

7

ಪರಿಷತ್ ವಿರೋಧ ಪಕ್ಷದ ನಾಯಕರಾಗಿ ಎಸ್.ಆರ್. ಪಾಟೀಲ

Published:
Updated:
ಪರಿಷತ್ ವಿರೋಧ ಪಕ್ಷದ ನಾಯಕರಾಗಿ ಎಸ್.ಆರ್. ಪಾಟೀಲ

ಬೆಂಗಳೂರು: ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕರಾಗಿ ಎಸ್.ಆರ್.ಪಾಟೀಲ ಅವರು ನೇಮಕಗೊಂಡಿದ್ದಾರೆ.ಮೋಟಮ್ಮ ಅವರಿಂದ ತೆರವಾದ ವಿರೋಧ ಪಕ್ಷದ ನಾಯಕನ ಸ್ಥಾನಕ್ಕೆ ಲಿಂಗಾಯತ ಸಮುದಾಯದ ಪಾಟೀಲ ಅವರನ್ನು ನೇಮಕ ಮಾಡಲು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಒಪ್ಪಿಗೆ ನೀಡಿದ್ದಾರೆ.ಅವರ ಆದೇಶದ ಹಿನ್ನೆಲೆಯಲ್ಲಿ ಪಾಟೀಲ ಅವರನ್ನು ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಂತೆ ಕಾಂಗ್ರೆಸ್ ಶಾಸಕಾಂಗ ಪಕ್ಷದನಾಯಕ ಸಿದ್ದರಾಮಯ್ಯ ಅವರು ಪರಿಷತ್ತಿನ ಹಂಗಾಮಿ ಸಭಾಪತಿ ಎಂ.ವಿ.ರಾಜಶೇಖರನ್ ಅವರಿಗೆ ಪತ್ರ ಬರೆದಿದ್ದಾರೆ.ಈ ಪತ್ರವನ್ನು ಆಧರಿಸಿ ಪಾಟೀಲ ಅವರನ್ನು ನಾಯಕರನ್ನಾಗಿ ನೇಮಕ ಮಾಡಿರುವ ಬಗ್ಗೆ ಸಭಾಪತಿ ಗುರುವಾರ ಸದನದಲ್ಲಿ ಪ್ರಕಟಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry