ಸೋಮವಾರ, ಜೂನ್ 21, 2021
22 °C

ಪರಿಸರಕ್ಕೆ ಮಾರಕವಾದ ಗಣಿಗಾರಿಕೆ ವಿರೋಧಿಸಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೊಸನಗರ: ವಿಶ್ವದ ಪರಿಸರ ಸೂಕ್ಷ್ಮ  ಪ್ರದೇಶವಾದ ಪಶ್ಚಿಮಘಟ್ಟದ ಉಳಿವಿಗೆ ಯುವ ಸಮುದಾಯ ಪಾತ್ರ ಮಹತ್ವದ್ದಾಗಿದೆ ಎಂದು ಪಶ್ಚಿಮಘಟ್ಟ ಕಾರ್ಯಪಡೆ ಅಧ್ಯಕ್ಷ ಅನಂತ ಹೆಗಡೆ ಹೇಳಿದರು.ಬುಧವಾರ ತಾಲ್ಲೂಕಿನ ರಾಮಚಂದ್ರಾಪುರ ಮಠದಲ್ಲಿ ಪಶ್ಚಿಮಘಟ್ಟ ಕಾರ್ಯಪಡೆ, ಅರಣ್ಯ ಇಲಾಖೆ, ಕುವೆಂಪು ವಿವಿ, ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಗ್ರಾಮಭಾರತಿ ಟ್ರಸ್ಟ್ ಆಶ್ರಯದಲ್ಲಿ `ಪಶ್ಚಿಮಘಟ್ಟ ಸಂರಕ್ಷಣೆಗಾಗಿ ವಿಧ್ಯಾರ್ಥಿ ಯುವಜನತೆ~ ರಾಜ್ಯಮಟ್ಟದ 3 ದಿನಗಳ ಪರಿಸರ ಅಧ್ಯಯನ ಶಿಬಿರ ಉದ್ಘಾಟಿಸಿ ಮಾತನಾಡಿದರು.ಪಶ್ಚಿಮಘಟ್ಟದ ಮೇಲಿನ ಪರಿಸರಕ್ಕೆ ಮಾರಕವಾದ ಗಣಿಗಾರಿಕೆ, ಅಭಿವೃದ್ಧಿ ಯೋಜನೆಗಳನ್ನು ಸತ್ಯಾಗ್ರಹದ ಮೂಲಕ ವಿರೋಧಿಸಲು ಯುವಪೀಳಿಗೆ ಸಜ್ಜಾಗಬೇಕು ಹೊರತು ಈ ಪ್ರದೇಶದ ರಕ್ಷಣೆಯ ಹೆಸರಿನಲ್ಲಿ ನಡೆಯುತ್ತಿರುವ ನಕ್ಸಲ್ ವಾದವನ್ನು ಅವರು ಈ ಸಂದರ್ಭದಲ್ಲಿ ಖಂಡಿಸಿದರು.ದಕ್ಷಿಣ ಭಾರತಕ್ಕೆ ನೀರುಣಿಸುವ ಪಶ್ಚಿಮ-ಪೂರ್ವಘಟ್ಟಗಳ ಮೇಲೆ ಅನೇಕ ವಿವಿಧ ಒತ್ತಡಗಳು ಹೆಚ್ಚಾಗುತ್ತಿರುವ ಪರಿಣಾಮ 22 ಪ್ರಮುಖ ನದಿ ಹಾಗೂ 180 ಉಪ ನದಿಗಳ ನೀರಿನ ಸೆಲೆ ಬರಿದಾಗುತ್ತಿದೆ ಎಂದು ವಿಷಾದಿಸಿದರು.ಜಿ.ಪಂ. ಅಧ್ಯಕ್ಷೆ ಶುಭಾ ಕೃಷ್ಣಮೂರ್ತಿ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ, ಪರಿಸರ ಕಾಳಜಿಯನ್ನು ವಿದ್ಯಾರ್ಥಿ ದಿಸೆಯಿಂದಲೇ ಬೆಳೆಸಿಕೊಳ್ಳುವಂತೆ ಮನವಿ ಮಾಡಿದರು.ಭಾರತೀಯ ವಿಜ್ಞಾನ ಮಂದಿರದ ವಿಜ್ಞಾನಿ ಡಾ.ಟಿ.ವಿ. ರಾಮಚಂದ್ರ, ತಾ.ಪಂ. ಅಧ್ಯಕ್ಷೆ ಸುಮಾ ಸುಬ್ರಹ್ಮಣ್ಯ, ಕೊಡಚಾದ್ರಿ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಪ್ರೊ.ಶಿವನಂಜಪ್ಪ, ಸಹಾಯಕ ಅರಣ್ಯ ಸಂಕ್ಷಣಾಧಿಕಾರಿ ಬಿ. ಹುಚ್ಚಯ್ಯ, ಪಶ್ಚಿಮಘಟ್ಟ ಕಾರ್ಯಪಡೆ ಸದಸ್ಯ ಪ್ರೊ.ಬಿ.ಎಂ. ಕುಮಾರಸ್ವಾಮಿ, ಕುವೆಂಪು ವಿವಿ ಎನ್‌ಎಸ್‌ಎಸ್ ಕಾರ್ಯಕ್ರಮ ಸಂಯೋಜಕ  ಡಾ.ಕುಂದನ್ ಬಸವರಾಜ್, ಶ್ರೀಮಠದ ಸಂಪೆಕಟ್ಟೆ ಕುಮಾರ್ ಹಾಜರಿದ್ದರು.ಕುವೆಂಪು ವಿಶ್ವವಿದ್ಯಾಯಲದ ರಾಷ್ಟ್ರೀಯ ಸೇವಾ ಯೋಜನೆಯ ಸುಮಾರು 140ಕ್ಕೂ ಹೆಚ್ಚು ವಿದ್ಯಾರ್ಥಿಗಳು 3 ದಿನಗಳ ರಾಜ್ಯಮಟ್ಟದ ಪರಿಸರ ಅಧ್ಯಯನದಲ್ಲಿ ಭಾಗವಹಿಸಿದ್ದರು.ಪ್ರೊ.ನಳಿನಚಂದ್ರ ಸ್ವಾಗತಿಸಿದರು. ಹನಿಯಾ ರವಿ, ಪ್ರೊ.ಚಂದ್ರಶೇಖರ್ ಕಾರ್ಯಕ್ರಮ ನಿರೂಪಿಸಿದರು. ಬಿ.ಎಚ್. ರಾಘವೇಂದ್ರ ಪ್ರಾಸ್ತಾವಿಕ ಮಾತನಾಡಿದರು. ಪರಿಸರ ನಾಗರಾಜ್ ವಂದಿಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.