ಶುಕ್ರವಾರ, ಏಪ್ರಿಲ್ 16, 2021
31 °C

ಪರಿಸರಕ್ಕೆ ಮೀಸಲಿಟ್ಟ ಹಣ ದುರ್ಬಳಕೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಗೌರಿಬಿದನೂರು: ವಿಶ್ವಸಂಸ್ಥೆ  ಪರಿಸರಕ್ಕಾಗಿ ನೀಡುತ್ತಿರುವ ಕೋಟ್ಯಂತರ ರೂಪಾಯಿ ದುರ್ಬಳಕೆಯಾಗುತ್ತಿದೆ ಎಂದು ಶಿಕ್ಷಣ ಇಲಾಖೆ  ನಿವೃತ್ತ ಜಂಟಿ  ನಿರ್ದೇಶಕ ಕೆ.ನಾರಾಯಣಸ್ವಾಮಿ ವಿಷಾದ ವ್ಯಕ್ತಪಡಿಸಿದರು.ಪಟ್ಟಣದ ವಿನಾಯಕ ನಗರದಲ್ಲಿ ಪರಿಸರ ಹಾಗೂ ಅರಣ್ಯ ಸಚಿವಾಲಯ ಮತ್ತು ರಾಜ್ಯ ವಿಜ್ಞಾನ ಪರಿಷತ್ ವತಿಯಿಂದ ಸೋಮವಾರ ನಡೆದ ಪರಿಸರ ಜಾಗೃತಿ ಶಿಬಿರದಲ್ಲಿ ಮಾತನಾಡಿದರು.ದೇಶದಲ್ಲಿ ಶೇ 33ರಷ್ಟು ಅರಣ್ಯ ಸಂಪತ್ತು ಈಗ ಶೇ 13ಕ್ಕೆ ಇಳಿದಿದೆ. ಪ್ರತಿ ವ್ಯಕ್ತಿ ಪ್ರಕೃತಿ ಬಗ್ಗೆ ಕಾಳಜಿ ಬೆಳೆಸಿಕೊಂಡಾಗ ಮಾತ್ರ ಹಸಿರು ಉಳಿಯಲು ಸಾಧ್ಯ ಎಂದರು.ರಾಜ್ಯ ವಿಜ್ಞಾನ ಪರಿಷತ್ ಸದಸ್ಯ ಶಿವಪ್ರಕಾಶ್ ಮಾತನಾಡಿ, ಪ್ರಕೃತಿಯಲ್ಲಿ ಮಾನವನ ಎಲ್ಲಾ ಆಸೆಗಳನ್ನು ಪೂರೈಸುವ ಶಕ್ತಿ ಅಡಗಿದೆ. ಆದರೆ ದುರಾಸೆಗಳನ್ನಲ್ಲ ಎಂದು ತಿಳಿದುಕೊಳ್ಳಬೇಕು ಎಂದು ಹೇಳಿದರು.

ಪರಿಷತ್ ಪದಾಧಿಕಾರಿಗಳಾದ ದೇವಿ ಮಂಜುನಾಥ್, ವೆಂಕಟೇಶ್, ಭಾಗ್ಯಲಕ್ಷ್ಮಿ, ಮಮತಾಭಟ್ ಮತ್ತಿತರರು ರಾಷ್ಟ್ರೀಯ ಜಾಗೃತಿ ಶಿಬಿರದಲ್ಲಿ ಉಪಸ್ಥಿತರಿದ್ದರು.

 

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.