ಭಾನುವಾರ, ಮೇ 9, 2021
27 °C
ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಪರಿಸರ ಜಾಥಾ, ವನಮಹೋತ್ಸವ

ಪರಿಸರದ ಮೇಲೆ ನಿರಂತರ ದಬ್ಬಾಳಿಕೆ ಸಲ್ಲ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಶಿಕಾರಿಪುರ: ಪರಿಸರ ಉಳಿದರೆ ಮಾತ್ರ ನಾವು ಬದುಕಲು ಸಾಧ್ಯವಾಗಿದ್ದು, ಪರಿಸರ ಉಳಿಸುವ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ನಡೆಸಬೇಕು ಎಂದು ಸಂಸತ್ ಸದಸ್ಯ ಬಿ.ವೈ. ರಾಘವೇಂದ್ರ ಅಭಿಪ್ರಾಯಪಟ್ಟರು.ಪಟ್ಟಣದ ಸಾಂಸ್ಕೃತಿಕ ಭವನದಲ್ಲಿ ಸೋಮ ವಾರ ಪುರಸಭೆ, ತಾಲ್ಲೂಕು ಪಂಚಾಯ್ತಿ, ಶಿಕ್ಷಣ ಇಲಾಖೆ, ಅರಣ್ಯ ಇಲಾಖೆ, ತೋಟಗಾರಿಕಾ ಇಲಾಖೆ, ಲೋಕೋಪಯೋಗಿ ಇಲಾಖೆ, ಆರೋಗ್ಯ ಇಲಾಖೆ, ರಕ್ಷಣಾ ಇಲಾಖೆ, ಪಶು ಪಾಲನಾ ಇಲಾಖೆ, ಪರಿಸರ ಪ್ರವಾಸೋದ್ಯಮ ಅಭಿವೃದ್ಧಿ ಸಂಸ್ಥೆ, ಬಸವೇಶ್ವರ ಸಹಕಾರಿ ಒಕ್ಕೂಟ, ಶರಣ ಸಾಹಿತ್ಯ ಪರಿಷತ್, ಸವಿತಾ ಸಂಘ ಹಾಗೂ ಶಿವಮೊಗ್ಗ ಮಾಲಿನ್ಯ ನಿಯಂತ್ರಣ ಮಂಡಳಿ ಆಶ್ರಯದಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಪರಿಸರ ಜಾಥಾ, ವನ ಮಹೋತ್ಸವ ಹಾಗೂ ಪುರಸಭಾ ನೂತನ ಸದಸ್ಯರಿಗೆ ನಡೆದ ಅಭಿನಂದನಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.ಕೃಷಿ ಸೇರಿದಂತೆ ಇತರೆ ಉದ್ದೇಶಗಳಿಗಾಗಿ ನಾವು ಇಂದು ಅರಣ್ಯ ನಾಶ ಮಾಡುತ್ತಿದ್ದು, ಪರಿಸರದ ಮೇಲೆ ನಿರಂತರ ದಬ್ಬಾಳಿಕೆಯಿಂದ ಸುನಾಮಿ, ಭೂಕಂಪದಂತಹ ಪ್ರಕೃತಿ ವಿಕೋಪ ಗಳು ಸಂಭವಿಸುತ್ತಿವೆ ಎಂದು ಆತಂಕ ವ್ಯಕ್ತಪಡಿಸಿದರು.ಸಾಗರ ಉಪ ವಿಭಾಗಧಿಕಾರಿ ಡಾ.ಉದಯ್‌ಕುಮಾರ್ ಶೆಟ್ಟಿ ಮಾತನಾಡಿ, ಉತ್ತಮ ಪರಿಸರ ಸ್ವಚ್ಛ ಪರಿಸರ ನಿರ್ಮಿಸುವ ನಿಟ್ಟಿನಲ್ಲಿ ಶ್ರಮಿಸೋಣ ಎಂದರು.ಜಿಲ್ಲಾ ಜಾಗೃತಿ ಸಮಿತಿ ಸದಸ್ಯ ಕೆ.ಎಸ್. ಗುರುಮೂರ್ತಿ, ತಹಶೀಲ್ದಾರ್ ಪ್ರಕಾಶ್ ಗಣಾಚಾರಿ, ಪುರಸಭೆ ಮುಖ್ಯಾಧಿಕಾರಿ ಮನೋಹರ್, ವಲಯ ಅರಣ್ಯಾಧಿಕಾರಿ ಸುರೇಶ್, ಕ್ಷೇತ್ರ ಶಿಕ್ಷಣಾಧಿಕಾರಿ ಸಿದ್ದಲಿಂಗಪ್ಪ, ತಾಲ್ಲೂಕು ಪಂಚಾಯ್ತಿ ಅಧ್ಯಕ್ಷ ಹನುಮಂತಪ್ಪ, ಉಪಾಧ್ಯಕ್ಷೆ ಸರೋಜಮ್ಮ, ಕಾರ್ಯನಿರ್ವಹಕ ಅಧಿಕಾರಿ ಡಾ.ಚಂದ್ರಶೇಖರ್, ಎಂಜಿನಿಯರ್ ರಮೇಶ್ ಬ್ಯಾಣದ್, ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಬಿ.ಡಿ. ಭೂಕಾಂತ್, ವಿವಿಧ ಸಂಘಟನೆ ಪದಾಧಿಕಾರಿಗಳಾದ ಸುಭಾಷ್ ಚಂದ್ರ ಸ್ಥಾನಿಕ್, ಬಸವಿಜಯ.ಬಿ.ಕೊಪ್ಪದ್, ರುದ್ರಮುನಿ, ಎಸ್.ಜಿ. ಜಯಪ್ಪ, ಸಿ. ನಾಗರಾಜ್,ನೂತನ ಪುರಸಭೆ ಸದಸ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.ಕಾರ್ಯಕ್ರಮಕ್ಕೂ ಮೊದಲು ವಿವಿಧ ಶಾಲಾ ವಿದ್ಯಾರ್ಥಿಗಳು ನಗರದ ಪ್ರಮುಖ ಬೀದಿಗಳಲ್ಲಿ ಪರಿಸರ ಜಾಗೃತಿ ಜಾಥಾ ನಡೆಸಿದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.