`ಪರಿಸರ ಪ್ರೀತಿ'ಯಿಂದ ಕಾಲು ನಡಿಗೆ ಜಾಥಾ

7

`ಪರಿಸರ ಪ್ರೀತಿ'ಯಿಂದ ಕಾಲು ನಡಿಗೆ ಜಾಥಾ

Published:
Updated:

ಬೆಂಗಳೂರು: ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಸಹಯೋಗದಲ್ಲಿ ಮಲ್ಲೇಶ್ವರದ ಎಂಇಎಸ್ ಕಾಲೇಜು `ಪರಿಸರ ಸ್ನೇಹಿ ಗಣಪತಿ' ಕಾಲು ನಡಿಗೆ ಜಾಥಾವನ್ನು ಭಾನುವಾರ ಆಯೋಜನೆ ಮಾಡಿತ್ತು.ಕಾಲೇಜಿನ ವಿದ್ಯಾರ್ಥಿಗಳು ಮಲ್ಲೇಶ್ವರದ ಕೆಲವು ಭಾಗಗಳಲ್ಲಿ ಬೀದಿ ನಾಟಕಗಳನ್ನು ಅಭಿನಯಿಸಿ, ಪರಿಸರ ಸ್ನೇಹಿ ಗಣಪತಿ ಹಬ್ಬದ ಆಚರಣೆ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಿದರು. ರಾಸಾಯನಿಕ ಬಣ್ಣಗಳಿಂದ ತಯಾರಿಸುವ ಗಣಪತಿ ಮೂರ್ತಿಗಳಿಂದಾಗುವ ಪರಿಸರ ಮಾಲಿನ್ಯದ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಯಿತು.ಜಾಥಾಗೆ ಚಾಲನೆ ನೀಡಿ ಮಾತನಾಡಿದ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಡಾ.ವಾಮನ ಆಚಾರ್ಯ, `ಜನರಲ್ಲಿ ಪರಿಸರ ಸ್ನೇಹಿ ಗಣಪತಿ ಮೂರ್ತಿಗಳ ಬಗ್ಗೆ ಅರಿವು ಮೂಡಿಸುವ ಅನೇಕ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿದೆ. ಸ್ವಯಂ ಸೇವಾ ಸಂಸ್ಥೆಗಳ ಜತೆಗೂಡಿ ಪರಿಸರ ಸ್ನೇಹಿ ಗಣಪತಿ ಮೂರ್ತಿಗಳನ್ನು ತಯಾರಿಸಿ ಸಾರ್ವಜನಿಕರಿಗೆ ವಿತರಿಸಲಾಗುತ್ತಿದೆ. ಅಲ್ಲದೆ ಸ್ವಯಂ ಸೇವಾ ಸಂಸ್ಥೆಗಳು ಹಾಗೂ ಶಿಕ್ಷಣ ಸಂಸ್ಥೆಗಳ ಸಹಯೋಗದಲ್ಲಿ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ' ಎಂದು ಹೇಳಿದರು.`ಮಾಲಿನ್ಯ ನಿಯಂತ್ರಣ ಮಂಡಳಿಯ ಎಲ್ಲ ಕಾರ್ಯಕ್ರಮಗಳ ಬಗ್ಗೆ ಜನರಿಂದ ಒಳ್ಳೆಯ ಪ್ರತಿಕ್ರಿಯೆ ಬಂದಿದೆ. ಶಾಲಾ- ಕಾಲೇಜುಗಳ ವಿದ್ಯಾರ್ಥಿಗಳೂ ಪರಿಸರ ಸ್ನೇಹಿ ಗಣಪತಿ ಅಭಿಯಾನದಲ್ಲಿ ಸಕ್ರಿಯವಾಗಿ ಪಾಲ್ಗೊಂಡಿದ್ದಾರೆ' ಎಂದು ಹೇಳಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry