ಗುರುವಾರ , ಮೇ 6, 2021
23 °C

ಪರಿಸರ ಸಂರಕ್ಷಣೆ ನಮ್ಮೆಲ್ಲರ ಹೊಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಚಳ್ಳಕೆರೆ: ಆಧುನಿಕ ಕಾಲಘಟ್ಟದ ಒತ್ತಡದ ಬದುಕಿನಲ್ಲಿ ಜೀವಿಸುತ್ತಿರುವ ಮನುಷ್ಯ ಆರೋಗ್ಯ ಸಮತೋಲನ ಕಾಯ್ದುಕೊಳ್ಳಲು ಅತ್ಯಗತ್ಯವಾಗಿ ಪರಿಸರವನ್ನು ಸಂರಕ್ಷಿಸುವ ಗುರುತರ ಜವಾಬ್ಧಾರಿ ನಮ್ಮೆಲ್ಲರ ಮೇಲಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರಾದ ಸುವರ್ಣ ಕುಬ್ಬಣ್ಣ ಮಿರ್ಜಿ ಅಭಿಪ್ರಾಯಪಟ್ಟರು.ಪಟ್ಟಣದ ನ್ಯಾಯಾಲಯದ ಆವರಣ ದಲ್ಲಿ ಬುಧವಾರ ವಕೀಲರ ಸಂಘ, ಕಾನೂನು ಸೇವಾ ಸಮಿತಿ, ನ್ಯಾಯಾಂಗ ಇಲಾಖೆ ಸಹಯೋಗದಲ್ಲಿ ಆಯೋಜಿಸಿದ್ದ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ನಾವು ವಾಸಿಸುವ ಪ್ರದೇಶದಲ್ಲಿ ಗಿಡಮರಗಳು ಹೆಚ್ಚಿನ ಸಂಖ್ಯೆಯಲ್ಲಿ ಇದ್ದಾಗ ಮಾತ್ರ ಪರಿಸರ ಚೆನ್ನಾಗಿರುತ್ತದೆ. ಅದ್ದರಿಂದ ಪ್ರತಿಯೊಬ್ಬರೂ ಒಂದೊಂದು ಗಿಡವನ್ನು ರಕ್ಷಿಸುವ ಜವಾಬ್ಧಾರಿ ತೆಗೆದುಕೊಂಡು ಪರಿಸರ ಕಾಪಾಡಬೇಕು ಹಾಗೂ ಪರಿಸರ ಜಾಗೃತಿಯನ್ನು ಮೂಡಿಸಬೇಕು ಎಂದು ನುಡಿದರು.ಕಿರಿಯ ವಿಭಾಗದ ಸಿವಿಲ್ ನ್ಯಾಯಾಧೀಶರಾದ ಬಿ.ದೀಲಿಪ್ ಕುಮಾರ್ ಮಾತನಾಡಿದರು. ವಕೀಲರ ಸಂಘದ ಅಧ್ಯಕ್ಷ ಕೆ.ಬಿ. ಪ್ರಭಾಕರ್, ಸರ್ಕಾರಿ ಅಭಿಯೋಜಕ ಎ.ಎಂ.ಬಸವ ರಾಜ್ ಹಾಗೂ ವಕೀಲರ ಸಂಘದ ಪದಾಧಿಕಾರಿಗಳು ಇದ್ದರು.ಪರಿಸರ ಜಾಗೃತಿ ಜಾಥಾ: ಪಟ್ಟಣದ ಮಹಾತ್ಮಗಾಂಧಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಬುಧವಾರ ಹಮ್ಮಿಕೊಂಡಿದ್ದ ಪರಿಸರ ಜಾಗೃತಿ ಜಾಥಾಕ್ಕೆ ವಕೀಲರ ಸಂಘದ ಮಾಜಿ ಅಧ್ಯಕ್ಷ ಜಿ.ಆರ್.ಅಶ್ವತ್‌ನಾಯಕ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಶಾಲೆಯ ಬೋಧಕ ಸಿಬ್ಬಂದಿ ಹಾಗೂ ವಿಜ್ಞಾನ ಕೇಂದ್ರದ ಮಂಜುನಾಥ್ ಇದ್ದರು.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.