`ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಹಕ್ಕು'

7

`ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಹಕ್ಕು'

Published:
Updated:

ಮಸ್ಕಿ: ಹಾಳಾಗುತ್ತಿರುವ ನಮ್ಮ ಪರಿಸರದ ರಕ್ಷಣೆ ನಮ್ಮ ಕರ್ತವ್ಯವಾಗಿದೆ. ಪ್ರತಿಯೊಬ್ಬರು ಇದರ ಬಗ್ಗೆ ಚಿಂತಿಸಿದಾಗ ಮಾತ್ರ ನಮ್ಮ ಗ್ರಾಮಗಳು ಸ್ವಚ್ಚ ಗ್ರಾಮಗಳಾಗಲು ಸಾದ್ಯ ಎಂದು ಶಾಸಕ ಪ್ರತಾಪಗೌಡ ಪಾಟೀಲ ಸೋಮವಾರ ತಿಳಿಸಿದರು.ರಾಯಚೂರು ಜಿಲ್ಲಾ ಪಂಚಾಯ್ತಿ, ಲಿಂಗಸೂಗೂರು ತಾಲ್ಲೂಕು ಪಂಚಾಯ್ತಿ ಹಾಗೂ ಮಸ್ಕಿ ಗ್ರಾಮ ಪಂಚಾಯ್ತಿ ಸಂಯುಕ್ತವಾಗಿ ಮಸ್ಕಿಯಲ್ಲಿ ಹಮ್ಮಿಕೊಂಡಿದ್ದ ಐದು ದಿನಗಳ ಸ್ವಚ್ಚತಾ ಆಂದೋಲನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಸ್ವಚ್ಚತೆ ಬಗ್ಗೆ ಜನರಲ್ಲಿ ಅರಿವು ಮೂಡಿಸುವ ಕಾರ್ಯಕ್ರಮ ನಡೆಯಬೇಕಾಗಿದೆ ಎಂದರು.ಗ್ರಾಮ ಪಂಚಾಯ್ತಿ ಆಡಳಿತ ಮಂಡಳಿ ಹಾಗೂ ಸಿಬ್ಬಂಧಿ ಗ್ರಾಮದಲ್ಲಿ ಸ್ವಚ್ಚತೆ ಮೂಡಿಸುವ ಕಾರ್ಯಕ್ಕೆ ಮುಂದಾಗಿ ಹರಡುವ ವಿವಿಧ ರೋಗಗಳನ್ನು ತಡೆಯುವಲ್ಲಿ ಮುಂದಾಗಬೇಕು ಎಂದು ಅವರು ಮನವಿ ಮಾಡಿದರು.ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾ ಘಟಕದ ಅಧ್ಯಕ್ಷ ಮಹಾಂತೇಶ ಮಸ್ಕಿ ಮಾತನಾಡಿ ಜಿಲ್ಲಾ ಪಂಚಾಯ್ತಿ ಐತಿಹಾಸಿಕ ಮಸ್ಕಿಯಲ್ಲಿ ಸ್ವಚ್ಛತಾ ಆಂದೋಲನ ಹಮ್ಮಿಕೊಳ್ಳುವ ಮೂಲಕ ಮಾದರಿಯಾಗಿದೆ ಎಂದರು. ಇದು ಇಷ್ಟಕ್ಕೆ ನಿಲ್ಲದೆ ಜಿಲ್ಲೆಯಾದ್ಯಂತ ಇಂತಹ ಕಾರ್ಯಕ್ರಮ ಹಮ್ಮಿಕೊಳ್ಳಬೇಕು ಎಂದು ಸಲಹೆ ನೀಡಿದರು.ಜಿಲ್ಲಾ ಪಂಚಾಯ್ತಿ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಜ್ಞಾನಪ್ರಕಾಶ ಮಾತನಾಡಿ ಚುನಾಯಿತ ಪ್ರತಿನಿಧಿಗಳ ಹಾಗೂ ಪಂಚಾಯ್ತಿ ಸಿಬ್ಬಂದಿ ಸಹಕಾರದಿಂದ ಈ ಕಾರ್ಯಕ್ರಮ ಹಮ್ಮಿಕೊಂಡಿದ್ದು ಐದು ದಿನಗಳಲ್ಲಿ ಇದರ ಪ್ರಗತಿ ತಿಳಿಯಲಿದೆ ಎಂದರು. ಜಿಪಂ ಸದಸ್ಯ ಎಚ್. ಬಿ. ಮುರಾರಿ ಪ್ರಸ್ತಾವಿಕ ಮಾತನಾಡಿದರು.ಜಿಲ್ಲಾ ಪಂಚಾಯ್ತಿ ಸದಸ್ಯ ಮಹಾದೇವಪ್ಪಗೌಡ ಪೊ. ಪಾಟೀಲ, ತಾಲ್ಲೂಕು ಪಂಚಾಯ್ತಿ ಸದಸ್ಯ ಹನುಮಂತಪ್ಪ ಮೋಚಿ, ಗ್ರಾಮ ಪಂಚಾಯ್ತಿ ಅಧ್ಯಕ್ಷ ಶಂಕ್ರಪ್ಪ ಮೋಚಿ, ತಾಲ್ಲೂಕು ಪಂಚಾಯ್ತಿ ಕಾರ್ಯ ನಿರ್ವಾಹಕ ಅಧಿಕಾರಿ ವೀರಭದ್ರಪ್ಪ, ಕಾರ್ಯನಿರ್ವಾಹಕ ಎಂಜನಿಯರ್ ಸಿ.ಎಸ್. ಪಾಟೀಲ, ಪಂಚಾಯ್ತಿ ಸಿಬ್ಬಂದಿ ಮೌನೇಶ, ತಾಯಮ್ಮ ವೇದಿಕೆ ಮೇಲೆ ಉಪಸ್ಥಿತರಿದ್ದರು.ಎಂಜನಿಯರ್ ನಾಗೇಂದ್ರ ಪಟ್ಟಣಶೆಟ್ಟಿ ಸ್ವಾಗತಿಸಿದರು. ಪಂಚಾಯ್ತಿ ಅಭಿವೃದ್ಧಿ ಅಧಿಕಾರಿ ಹನುಮೇಶ ಕುಲಕರ್ಣಿ ವಂದಿಸಿದರು. ಶಿಕ್ಷಕ ಅಮರೇಗೌಡ ನಿರೂಪಿಸಿದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry