ಪರಿಸರ ಸ್ನೇಹಿ ಉದ್ದಿಮೆಗಳಿಗೆ ಮಾತ್ರ ಅವಕಾಶ: ಸಿಎಂ

7

ಪರಿಸರ ಸ್ನೇಹಿ ಉದ್ದಿಮೆಗಳಿಗೆ ಮಾತ್ರ ಅವಕಾಶ: ಸಿಎಂ

Published:
Updated:

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಪರಿಸರ ಹಾಗೂ ಕೃಷಿಗೆ ಪೂರಕವಾದ ಉದ್ದಿಮೆಗಳು ಮಾತ್ರ ಸ್ಥಾಪನೆಯಾ ಗಬೇಕು. ಈ ಮೂಲಕ ಇಲ್ಲಿನ ಪರಿಸರಕ್ಕೆ ಯಾವುದೇ ರೀತಿಯ ಧಕ್ಕೆಯಾಗದಂತೆ ನೋಡಿಕೊಳ್ಳಲು ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಹೇಳಿದರು.ನಗರದ ಕಾವೇರಿ ಹಾಲ್‌ನಲ್ಲಿ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆ, ಕೊಡಗು ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ, ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆ, ಪ್ರವಾ ಸೋದ್ಯಮ ಇಲಾಖೆ, ಕರ್ನಾಟಕ ರಾಜ್ಯ ಸಣ್ಣ ಕೈಗಾರಿಕಾ ಅಭಿವೃದ್ಧಿ ನಿಗಮ, ಮೂಲ ಸೌಕರ್ಯ ಅಭಿವೃದ್ಧಿ ಇಲಾಖೆ ಹಾಗೂ ರಾಷ್ಟ್ರೀಯ ಸಣ್ಣ ಕೈಗಾರಿಕೆಗಳ ನಿಗಮದ ಸಹಕಾರದೊಂದಿಗೆ ಮಂಗಳ ವಾರ ನಡೆದ `ಕೊಡಗು ವ್ಯಾಪಾರ ಅಭಿವೃದ್ಧಿ ಶೃಂಗಸಭೆ' ಉದ್ಘಾಟಿಸಿ ಅವರು ಮಾತನಾಡಿದರು.ಪರಿಸರ ಉಳಿಸಿಕೊಂಡು ಅಭಿವೃದ್ಧಿ ಯತ್ತ ದಾಪುಗಾಲು ಹಾಕ ಬೇಕಾಗಿದೆ. ಈ ನಿಟ್ಟಿನಲ್ಲಿ ಕೊಡಗಿನಲ್ಲಿ ಪರಿಸರ ಸ್ನೇಹಿ ಉದ್ಯಮಗಳಿಗೆ ಮಾತ್ರ ಪ್ರೋತ್ಸಾಹ ನೀಡಲು ಸರ್ಕಾರ ಬದ್ಧವಾಗಿದೆ ಎಂದರು.ಬೆಂಗಳೂರಿನಲ್ಲಿ 2010ರಲ್ಲಿ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ ಆಯೋಜಿಸಿದ್ದಾಗ ಸುಮಾ ರು ರೂ. 3.82 ಲಕ್ಷ ಕೋಟಿ ಬಂಡ ವಾಳ ಹೂಡಿಕೆ ಹರಿದು ಬಂದಿದೆ. 2012ರಲ್ಲಿ ಸುಮಾರು ರೂ. 7 ಲಕ್ಷ ಕೋಟಿ ಹೂಡಿಕೆಯಾಗಿದೆ. ರಾಜ್ಯದ ವಿವಿಧೆಡೆ ಬಂಡವಾಳ ಹೂಡಿಕೆಗೆ ಉದ್ಯಮಿಗಳು ಮುಂದಾಗಿದ್ದಾರೆ. ಇದರಿಂದ ರಾಜ್ಯದ ಸರ್ವತೋಮುಖ ಅಭಿವೃದ್ಧಿ ಸಾಧ್ಯ ಎಂದು ಹೇಳಿದರು.ಮೂಲಸೌಕರ್ಯಕ್ಕೆ ಒತ್ತು

ಕೊಡಗಿನಲ್ಲಿ ಹೂಡಿಕೆದಾರರಿಗೆ ಪೂರಕ ವಾತಾವರಣ ಸೃಷ್ಟಿಸಲು ಸರ್ಕಾರ ಬದ್ಧವಾಗಿದೆ. ರಸ್ತೆ ಅಭಿವೃ ದ್ಧಿಗಾಗಿ ರೂ. 400 ಕೋಟಿ ನೀಡ ಲಾಗಿದೆ. ಕೂಡಿಗೆ ಬಳಿ ಮಿನಿ ವಿಮಾನ ನಿಲ್ದಾಣ, ಕುಶಾಲನಗರದವರೆಗೆ ರೈಲು ಮಾರ್ಗ, ಮಡಿಕೇರಿಯಲ್ಲಿ ವೈದ್ಯಕೀಯ ಕಾಲೇಜು ನಿರ್ಮಾಣ ಸೇರಿದಂತೆ ಹಲವು ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ ಎಂದರು.ಜಿಲ್ಲಾ ಉಸ್ತುವಾರಿ ಸಚಿವ ಎಂ.ಪಿ. ಅಪ್ಪಚ್ಚು ರಂಜನ್ ಮಾತನಾಡಿ, ಉದ್ಯಮಿ ಗಳಿಗೆ ಸರ್ಕಾರಿ ಜಾಗ ನೀಡಲಾಗುವುದು. ಖಾಸಗಿ ಜಾಗವನ್ನು ಸ್ವಾಧೀನಪಡಿಸಿ ಕೊಳ್ಳುವುದಿಲ್ಲ. ಈ ಬಗ್ಗೆ ಜಿಲ್ಲೆಯ ಜನತೆ ಆತಂಕ ಪಡುವ ಅಗತ್ಯವಿಲ್ಲ ಎಂದು ಸ್ಪಷ್ಟಪಡಿಸಿದರು.

ಹೈಕೋರ್ಟ್ ಹಿರಿಯ ವಕೀಲ ಎ.ಕೆ. ಸುಬ್ಬಯ್ಯ ಮಾತನಾಡಿ, ಉದ್ಯಮಿಗಳ ಜೊತೆ ಮಾಡಿಕೊಳ್ಳುವ ಒಪ್ಪಂದಗಳನ್ನು ಅನುಷ್ಠಾನಗೊಳಿಸಲು ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕೆಂದು ಸಲಹೆ ನೀಡಿದರು.ಜಿಲ್ಲೆಯಲ್ಲಿ ಪರಿಸರ ಹಾಗೂ ಸಂಸ್ಕೃತಿ ಹೆಸರಿನಲ್ಲಿ ಅಭಿವೃದ್ಧಿಯನ್ನು ವಿರೋಧಿಸ ಲಾಗುತ್ತಿದೆ. ಜಿಲ್ಲೆಯಲ್ಲಿ ಕೃಷಿ ಕುಂಠಿತ ವಾಗುತ್ತಿದೆ. ರೈತರು ವಲಸೆ ಹೋಗು ತ್ತಿದ್ದಾರೆ. ಇವರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಿದರೆ ವಲಸೆ ತಡೆಯ ಬಹುದೆಂದರು.ವಿಧಾನ ಪರಿಷತ್ ಸದಸ್ಯ ಟಿ.ಜಾನ್ ಮಾತನಾಡಿ, ಜಿಲ್ಲೆಯಲ್ಲಿ ಹೂಡಿಕೆಗೆ ಪೂರಕವಾದ ವಾತಾವರಣ ಸೃಷ್ಟಿಸಬೇಕು. ಇಲ್ಲಿನ ರಸ್ತೆಗಳನ್ನು ಅಭಿವೃದ್ಧಿ ಪಡಿಸಲು ಕ್ರಮಕೈಗೊಳ್ಳ ಬೇಕು ಎಂದು ಸಲಹೆ ನೀಡಿದರು.ವಿಧಾನಸಭಾಧ್ಯಕ್ಷ ಕೆ.ಜಿ. ಬೋಪಯ್ಯ, ನಗರಸಭೆ ಅಧ್ಯಕ್ಷ ಎಚ್.ಎಂ. ನಂದಕುಮಾರ್, ಎಫ್‌ಕೆಸಿಸಿಐ ನಿಕಟಪೂರ್ವ ಅಧ್ಯಕ್ಷ ಜೆ.ಆರ್. ಬಂಗೇರಾ, ವಲಯ ಸಮಿತಿ ಅಧ್ಯಕ್ಷ ಕೆ.ಬಿ. ಗಿರೀಶ್ ಗಣಪತಿ ಹಾಜರಿದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry