ಸೋಮವಾರ, ಜುಲೈ 26, 2021
26 °C

`ಪರಿಹಾರ ಕ್ರಮಗಳ ವರದಿ ಕೊಡಿ'

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ನವದೆಹಲಿ (ಪಿಟಿಐ): ಉತ್ತರಾಖಂಡದ ಪ್ರಾಕೃತಿಕ ವಿಕೋಪಕ್ಕೆ ಸಂಬಂಧಿಸಿದಂತೆ ಕೈಗೊಳ್ಳಲಾದ ಪರಿಹಾರ ಹಾಗೂ ಪುನರ್ವಸತಿ ಕ್ರಮಗಳ ಕುರಿತು ವರದಿ ಸಲ್ಲಿಸುವಂತೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗವು ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ.

ಪ್ರವಾಹ, ಭೂಕುಸಿತದಿಂದ ಸಂಭವಿಸಿದ ಪ್ರಾಣಹಾನಿ ಹಾಗೂ ಆಸ್ತಿಪಾಸ್ತಿ ನಷ್ಟದ ಕುರಿತು ತೀವ್ರ ಕಳವಳ ವ್ಯಕ್ತಪಡಿಸಿರುವ ಆಯೋಗ, ವಿಕೋಪಕ್ಕೆ ಸಿಲುಕಿದ ನತದೃಷ್ಟರಿಗೆ ಪರಿಹಾರ ಹಾಗೂ ಪುನರ್ವಸತಿ ಕಲ್ಪಿಸಲು ಕೇಂದ್ರ ಮತ್ತು ರಾಜ್ಯ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಲಿವೆ ಎಂದು ವಿಶ್ವಾಸ ವ್ಯಕ್ತಪಡಿಸಿದೆ. ಪ್ರತಿಕೂಲ ಹವಾಮಾನದಲ್ಲೂ ಭದ್ರತಾ ಪಡೆಗಳು ನಡೆಸುತ್ತಿರುವ ಪರಿಹಾರ ಕಾರ್ಯದ ಕುರಿತು ಆಯೋಗ ಮೆಚ್ಚುಗೆ ವ್ಯಕ್ತಪಡಿಸಿದೆ.

ರಾಜಕೀಯ ಸಲ್ಲದು- ರಾಜನಾಥ್

ನವದೆಹಲಿ (ಪಿಟಿಐ):
ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಅವರು ನಡೆಸುತ್ತಿರುವ ಪರಿಹಾರ ಕಾರ್ಯಾಚರಣೆ ಕುರಿತು ಆಕ್ಷೇಪಿಸಿರುವ ಕಾಂಗ್ರೆಸ್ ವರ್ತನೆಯನ್ನು ಬಿಜೆಪಿ ಕಟುವಾಗಿ ಟೀಕಿಸಿದ್ದು, ಪ್ರವಾಹ ಪರಿಹಾರ ಕಾರ್ಯಾಚರಣೆಯಲ್ಲಿ ರಾಜಕೀಯ ಮಾಡುವುದು ಸರಿಯಲ್ಲ ಎಂದು ಪ್ರತಿಕ್ರಿಯಿಸಿದೆ.

`ಉತ್ತರಾಖಂಡದಲ್ಲಿ ಸಂಭವಿಸಿದ ಪ್ರಾಕೃತಿಕ ವಿಕೋಪಕ್ಕೆ ಸಂಬಂಧಿಸಿದಂತೆ ಹೇಳುವುದಾದರೆ ಯಾವುದೇ ರಾಜಕೀಯ ಪಕ್ಷವೂ ಇದರಲ್ಲಿ ರಾಜಕೀಯ ಮಾಡಬಾರದು' ಎಂದು ಪಕ್ಷದ ಅಧ್ಯಕ್ಷ ರಾಜನಾಥ ಸಿಂಗ್ ಮಂಗಳವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಪ್ರತಿಕ್ರಿಯಿಸಿದರು.

ರಾಜ್ಯವೊಂದರ ಮುಖ್ಯಮಂತ್ರಿ ಅಥವಾ ಪಕ್ಷವೊಂದು ಜನರಿಗೆ ನೆರವಿನ ಹಸ್ತ ಚಾಚಿದರೆ, ಅದನ್ನು ಒಪ್ಪಿಕೊಳ್ಳಬೇಕು. ಆದರೆ ಅದರಲ್ಲಿ ರಾಜಕೀಯ ಇದ್ದರೆ ಖಂಡನಾರ್ಹ ಎಂದು ಸಿಂಗ್ ಹೇಳಿದರು.

ಹರಿಯಾಣದಿಂದ 11 ಸಾವಿರ ಟೆಂಟ್

ಚಂಡೀಗಡ (ಪಿಟಿಐ):
ಪ್ರವಾಹ ಸಂತ್ರಸ್ತರಿಗೆಂದು ಹರಿಯಾಣ ಸರ್ಕಾರ 11,000 ಟೆಂಟ್‌ಗಳನ್ನು ರವಾನಿಸಿದೆ.

ಉತ್ತರಾಖಂಡ ಸರ್ಕಾರದ ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿ ಭೂಪಿಂದರ್ ಸಿಂಗ್ ಹೂಡಾ, ಮಂಗಳವಾರ ಈ ಟೆಂಟ್‌ಗಳನ್ನು ಕಳಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.