ಗುರುವಾರ , ಮೇ 13, 2021
16 °C

ಪರೀಕ್ಷಾ ವ್ಯವಸ್ಥೆ ಕುರಿತು ಚರ್ಚೆಯಾಗಲಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಈಗ ನಡೆಯುತ್ತಿರುವ 10ನೇ ತರಗತಿ ಪರೀಕ್ಷೆಗಳಲ್ಲಿ ವಿದ್ಯಾರ್ಥಿಗಳು ಅಲ್ಲಲ್ಲಿ ಸಾಮೂಹಿಕವಾಗಿ ಕಾಪಿ ಮಾಡುವ ಪ್ರಯತ್ನ ಮಾಡಿದ್ದಾರೆ. ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಹೊರಗಿನಿಂದ ಸರಿ ಉತ್ತರಗಳನ್ನು ಸರಬರಾಜು ಮಾಡುವ ವ್ಯವಸ್ಥೆ ಅನೇಕ ಊರುಗಳಲ್ಲಿದೆ.ನನ್ನ ಗಮನಕ್ಕೆ ಬಂದ ಮಾಹಿತಿಗಳ ಪ್ರಕಾರ ಬಹುತೇಕ ಕಡೆ ಪರೀಕ್ಷೆಗಳು ವ್ಯವಸ್ಥಿತವಾಗಿ ನಡೆದಿಲ್ಲ. ಮೂರ್ನಾಲ್ಕು ದಶಕಗಳ ಹಿಂದೆ ಪರೀಕ್ಷೆಗಳು ಅತ್ಯಂತ ವ್ಯವಸ್ಥಿತವಾಗಿ ನಡೆಯುತ್ತಿದ್ದವು. ಈಗ ಅಂತಹ ಕಟ್ಟುನಿಟ್ಟಿನ ಪರೀಕ್ಷೆ ನಡೆದ ಉದಾಹರಣೆಗಳು ತೀರಾ ವಿರಳ.ಪರೀಕ್ಷೆಯಲ್ಲಿ ನಕಲು ಮಾಡುವುದು, ಅದಕ್ಕೆ ಶಿಕ್ಷಕರು ಕುಮ್ಮಕ್ಕು ಕೊಡುವುದು, ಪ್ರಶ್ನೆ ಪತ್ರಿಕೆಗಳು ಬಹಿರಂಗವಾಗುವುದು ಇತ್ಯಾದಿ ಅವ್ಯವಹಾರಗಳು ನಡೆಯುತ್ತಲೇ ಇವೆ.

ಸರ್ಕಾರ ಮತ್ತು ಪರೀಕ್ಷಾ ಮಂಡಳಿ ಎಷ್ಟೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡರೂ ಅವ್ಯವಹಾರಗಳನ್ನು ತಡೆಯಲು ಆಗುತ್ತಿಲ್ಲ. ಕಷ್ಟಪಟ್ಟು ಓದುವ ವಿದ್ಯಾರ್ಥಿಗಳಿಗೆ ಅನ್ಯಾಯವಾಗುತ್ತಿದೆ.ನಮ್ಮ ಪರಿಕ್ಷಾ ವ್ಯವಸ್ಥೆಯ ಗುಣಮಟ್ಟ ಹೆಚ್ಚಿಸುವುದಕ್ಕೆ ಸರ್ಕಾರ ಆದೇಶ ಹೊರಡಿಸಿದರೆ ಸಾಲದು. ಪರೀಕ್ಷಾ ವ್ಯವಸ್ಥೆಯ ಲೋಪಗಳ ಬಗ್ಗೆ ಗಂಭೀರ ಚಿಂತನೆ ನಡೆಸಬೇಕು.

ಸಾರ್ವಜನಿಕರ ಪ್ರತಿನಿಧಿಗಳು, ವಿದ್ಯಾರ್ಥಿಗಳು, ಶಿಕ್ಷಣ ತಜ್ಞರು, ಇಲಾಖೆಯ ಅಧಿಕಾರಿಗಳು ಮತ್ತು ಪಾಲಕರು ಈ ಕುರಿತು ಚಿಂತಿಸುವ ಅಗತ್ಯವಿದೆ.ಪರೀಕ್ಷಾ ಅವ್ಯವಹಾರಗಳಿಗೆ ಉತ್ತೇಜನ ಕೊಡುವ ಶಿಕ್ಷಕರನ್ನು ಪತ್ತೆಹಚ್ಚಿ ಅವರನ್ನು ಶಿಕ್ಷಿಸಬೇಕು. ಈ ಕಾರ್ಯ ತುರ್ತಾಗಿ ಆಗಬೇಕಿದೆ.

ಫಲಿತಾಂಶ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.