ಶುಕ್ರವಾರ, ಏಪ್ರಿಲ್ 23, 2021
31 °C

ಪರೀಕ್ಷೆ ಭಯ ಬೇಡ: ಗೋವಿಂದ ರೆಡ್ಡಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಬೇವೂರ(ಬಾಗಲಕೋಟೆ):  ವಿದ್ಯಾರ್ಥಿಗಳು ಪರೀಕ್ಷೆಯ ಬಗ್ಗೆ ಭಯಪಡದೇ ಆತ್ಮವಿಶ್ವಾಸದೊಂದಿಗೆ ಸೂಕ್ತ ಪೂರ್ವಸಿದ್ಧತೆ ಮಾಡಿಕೊಂಡರೆ ಹೆಚ್ಚಿನ ಅಂಕ ಗಳಿಸುವುದು ಸಾಧ್ಯವಾಗುತ್ತದೆ ಎಂದು ಉಪ ವಿಭಾಗಾಧಿಕಾರಿ ಗೋವಿಂದ ರೆಡ್ಡಿ ಹೇಳಿದರು.ಗ್ರಾಮದ ಆದರ್ಶ ಸಂಯುಕ್ತ ಪದವಿ ಪೂರ್ವ ಮಹಾವಿದ್ಯಾಲಯ ದಲ್ಲಿ ಈಚೆಗೆ ಏರ್ಪಡಿಸಲಾಗಿದ್ದ 2010-11ನೇ ಸಾಲಿನ ಪ್ರತಿಭಾ ಪುರಸ್ಕಾರ ಹಾಗೂ ಎಸ್ಸೆಸ್ಸೆಲ್ಸಿ/ಪಿಯುಸಿ ದ್ವಿತೀಯ ವರ್ಷದ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭದಲ್ಲಿ ಅವರು ಮಾತನಾಡಿದರು.ಪರೀಕ್ಷೆ ಸಿದ್ಧತೆಯ ಬಗ್ಗೆ ಮಹತ್ವಪೂರ್ಣ ಸಲಹೆಗಳನ್ನು ನೀಡಿದ ಅವರು, ಯಾವುದೇ ಕಾರಣಕ್ಕೂ ವಿದ್ಯಾರ್ಥಿಗಳು ಆತಂಕಕ್ಕೆ ಒಳಗಾಗಬಾರದರು ಎಂದರು.ಅಧ್ಯಕ್ಷತೆ ವಹಿಸಿದ್ದ ಆದರ್ಶ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಅಶೋಕ ಸಜ್ಜನ ಅವರು ಶಿಕ್ಷಕ ಯು.ಜೆ. ಕುಲಕರ್ಣಿ ರಚಿಸಿದ ‘ಗದುಗಿನ ನಾದೋಪಾಸಕರು’ ಪುಸ್ತಕ ಬಿಡುಗಡೆಗೊಳಿಸಿ ಮಾತನಾಡಿದರು.

ಸಂಘದ ಸದಸ್ಯರಾದ ಬಿ.ಜಿ. ತೆಗ್ಗಿನಮನಿ, ಎಸ್.ಎಂ. ಹರಗಬಲ್, ಎನ್.ಜಿ. ಮಾಗನೂರ, ಶರಣಪ್ಪ ಅಂಗಡಿ ಮತ್ತಿತರರು ಉಪಸ್ಥಿತರಿದ್ದರು.ಪ್ರಾಚಾರ್ಯ ಜಿ.ಎಸ್. ಬಿಜಾಪುರ ಸ್ವಾಗತಿಸಿದರು. ಶಿಕ್ಷಕ ಎಸ್.ಎಸ್. ಬಸುಪಟ್ಟದ ಪರಿಚಯಿಸಿದರು. ಉಪನ್ಯಾಸಕ ಜೆ.ಕೆ. ಮಲ್ಲಾಪುರ ನಿರೂಪಿಸಿದರು. ಯು.ಜೆ. ಕುಲಕರ್ಣಿ ವಂದಿಸಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.