ಬೆಂಗಳೂರು : `ಇದೇ ತಿಂಗಳ 15 ರಿಂದ 31 ರವರೆಗೆ ನಡೆಯಲಿರುವ ಪದವಿ ಪೂರ್ವ ಪರೀಕ್ಷೆಗಳ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಅಧಿಕಾರಿಗಳು ಎಲ್ಲ ರೀತಿಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು~ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾಧಿಕಾರಿ ಎಸ್. ಶಂಕರನಾರಾಯಣ ಅವರು ಸೂಚಿಸಿದರು.

ಪರೀಕ್ಷೆಗಳ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ತಡೆಯಲು ಕೈಗೊಳ್ಳಬೇಕಾದ ವಿವಿಧ ಕ್ರಮಗಳ ಕುರಿತು ಮಂಗಳವಾರ ನಡೆದ ಜಿಲ್ಲಾ ಮಟ್ಟದ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, `ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಈ ಬಾರಿ 5,340 ಹೊಸ ಅಭ್ಯರ್ಥಿಗಳೂ ಸೇರಿದಂತೆ 7,180 ವಿದ್ಯಾರ್ಥಿಗಳು ಪದವಿಪೂರ್ವ ಪರೀಕ್ಷೆಗೆ ಹಾಜರಾಗುತ್ತಿದ್ದಾರೆ. ಜಿಲ್ಲೆಯ ನಾಲ್ಕೂ ತಾಲ್ಲೂಕುಗಳಲ್ಲಿ 12 ಪರೀಕ್ಷಾ ಕೇಂದ್ರಗಳಿದ್ದು ಅವುಗಳಲ್ಲಿ ಎರಡು ಪರೀಕ್ಷಾ ಕೇಂದ್ರಗಳನ್ನು ಅತಿಸೂಕ್ಷ್ಮ ಎಂದು ಗುರುತಿಸಲಾಗಿದೆ. ಪರೀಕ್ಷೆಯ ಸಂದರ್ಭದಲ್ಲಿ ಯಾವುದೇ ದೂರುಗಳಿಗೆ ಎಡೆ ಮಾಡಿಕೊಡದೆ, ಸಂಭವಿಸಬಹುದಾದ ಅಹಿತಕರ ಘಟನೆಗಳನ್ನು ತಡೆಗಟ್ಟಲು ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು~ ಎಂದು ಆದೇಶಿಸಿದರು.

ಪರೀಕ್ಷೆಯ ಸಂದರ್ಭದಲ್ಲಿ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇದಾಜ್ಞೆ ಜಾರಿಗೊಳಿಸಲಾಗುವುದಲ್ಲದೆ ಜೆರಾಕ್ಸ್ ಅಂಗಡಿಗಳನ್ನು ಮುಚ್ಚುವಂತೆ ನಿರ್ದೇಶನ ನೀಡಲಾಗಿದೆ.

ಸೂಕ್ತ ಭದ್ರತಾ ವ್ಯವಸ್ಥೆ ಕಲ್ಪಿಸುವಂತೆ ಪೊಲೀಸ್ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದಲ್ಲಿ ಪರೀಕ್ಷಾ ಕೇಂದ್ರಗಳಿಗೆ ಅನಿರೀಕ್ಷಿತ ಭೇಟಿ ನೀಡಿ ತಪಾಸಣೆ ಮಾಡಲು ಜಾಗೃತ ದಳಗಳನ್ನು ರಚಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.